ರಾಜಸ್ಥಾನ: ( Girl Falls Into Borewell ) ಮನೆಯ ಹೊರಗೆ ಆಟವಾಡುತ್ತಿದ್ದ ಮೂರು ವರ್ಷದ ಹೆಣ್ಣುಮಗು ಅಲ್ಲೇ ಇದ್ದ 700 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ಆಟವಾಡುತ್ತಿದ್ದ ಮೂರು ವರ್ಷದ ಹೆಣ್ಣುಮಗು ಚೇತನಾ ಕೊಳವೆ ಬಾವಿಗೆ ಬಿದ್ದಿದ್ದಾಳೆ. ಚೇತನಾಳ ಅಕ್ಕ ಕಾವ್ಯಾ ತಂಗಿ ಬಿದ್ದಿದ್ದನ್ನು ನೋಡಿ ತಕ್ಷಣವೇ ಪೋಷಕರಿಗೆ ವಿಚಾರ ತಿಳಿಸಿದ್ದಾಳೆ. ಕೂಡಲೇ ಕುಟುಂಬದವರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಮಾಹಿತಿ ಪಡೆದ ಅಧಿಕಾರಿಗಳು ತಕ್ಷಣ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಆರಂಭದಲ್ಲಿ 15 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದಳು ಆದರೆ ನಂತರ ಮತ್ತಷ್ಟು ಕೆಳಗೆ ಜಾರಿದ್ದಳು.ರಕ್ಷಣಾ ತಂಡವು ಪೈಪ್ ಮೂಲಕ ಆಕೆಗೆ ಆಮ್ಲಜನಕವನ್ನು ಒದಗಿಸಿತು ಮತ್ತು ಆಕೆಯ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಕ್ಯಾಮರಾವನ್ನು ಅಳವಡಿಸಿದ್ದಾರೆ.
ಸ್ಥಳೀಯ ಆಡಳಿತದೊಂದಿಗೆ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಜೆಸಿಬಿ ಯಂತ್ರದ ಸಹಾಯದಿಂದ ಬೋರ್‌ವೆಲ್ ಬಳಿ ಅಗೆಯುವ ಕಾರ್ಯ ಆರಂಭವಾಗಿದೆ. ಸಿಕ್ಕಿಬಿದ್ದ ಮಗುವಿಗೆ ಆಹಾರ ಪೂರೈಸುವ ಪ್ರಯತ್ನವೂ ನಡೆಯುತ್ತಿದೆ.