ಪಣಜಿ: 'ಭಾರತದಲ್ಲಿ ಬಿಜೆಪಿಯನ್ನು ಸೋಲಿಸಬಲ್ಲ ಏಕೈಕ ಪಕ್ಷ ಕಾಂಗ್ರೆಸ್. ಹೀಗಾಗಿ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಯನ್ನು ನಿಲ್ಲಿಸಬೇಕು' ಎಂದು ಗೋವಾ ಸಂಸದ ಫ್ರಾನ್ಸಿಸ್ಕೊ ಸರ್ಢಿನಾ ಹೇಳಿದ್ದಾರೆ.
ಚುನಾವಣಾ ಆಯೋಗ ನವೆಂಬರ್ 12ರಿಂದ ಹಿಮಾಚಲ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಸಲು ದಿನಾಂಕ ಪ್ರಕಟಿಸಿದೆ. ನಂತರ 182 ಸೀಟುಗಳಿರುವ ಗುಜರಾತ್ನಲ್ಲಿ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಮಾತನಾಡಿದ ಸರ್ಢಿನಾ, 'ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ಜನರನ್ನು ಜಾಗೃತಗೊಳಿಸಲು ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಯನ್ನು ನಿಲ್ಲಿಸಬೇಕು' ಎಂದಿದ್ದಾರೆ.(ಏಜೆನ್ಸೀಸ್)