Gold:ಅಮದುಗಳ ಮೇಲೆ ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ನೀಡಿದ ಬೆನ್ನಲ್ಲೇ ಇದೀಗ ಚಿನ್ನದ ದರವು 2,430 ರೂ. ದಿಢೀರ್ ಏರಿಕೆಯಾಗಿದೆ. ಇಂದು ಸೋಮವಾರ(ಫೆಬ್ರವರಿ 10) ರಾಷ್ಟ್ರ ರಾಜಧಾನಿಯಲ್ಲಿ ಪ್ರತಿ 10 ಗ್ರಾಂ ಚಿನ್ನದ ಬೆಲೆ 88,500 ರೂಪಾಯಿಗೆ ತಲುಪಿದೆ.
ಇದೇ ಮೊದಲ ಬಾರಿಗೆ ಚಿನ್ನದ ಬೆಲೆ ಇಷ್ಟು ಗರಿಷ್ಠ ಮಟ್ಟಕ್ಕೆ ತಲುಪಿದೆ ಎಂದು ಹೇಳಲಾಗುತ್ತಿದೆ. All India Sarafa Association ಪ್ರಕಾರ, ಜಾಗತಿಕ ಪ್ರವೃತ್ತಿಗಳು ಮತ್ತು ರೂಪಾಯಿ ಮೌಲ್ಯ ಕುಸಿತ ನಂತರ ಸೋಮವಾರ ರಾಷ್ಟ್ರ ರಾಜಧಾನಿಯಲ್ಲಿ ಚಿನ್ನದ ಬೆಲೆಗಳು 2,430 ರೂ.ಗಳಷ್ಟು ಏರಿಕೆಯಾಗಿದೆ ಎಂದು ಹೇಳಿದೆ.
ಡೊನಾಲ್ಡ್ ಟ್ರಂಪ್ ಎಲ್ಲಾ ಉಕ್ಕು ಮತ್ತು ಅಲ್ಯೂಮಿನಿಯಂ ಆಮದುಗಳ ಮೇಲೆ ಹೊಸದಾಗಿ ಶೇ.25ರಷ್ಟು ಸುಂಕಗಳನ್ನು ವಿಧಿಸುವುದಾಗಿ ಘೋಷಿಸಿದ ಬಳಿಕ ಜಾಗತಿಕವಾಗಿ ಮಾರುಕಟ್ಟೆಗಳಲ್ಲಿ ಲೋಹವು ದಾಖಲೆಯ ಮಟ್ಟ ತಲುಪಿದೆ. ಅಲ್ಲದೆ ಚಿನ್ನಾಭರಣ ವ್ಯಾಪಾರಿಗಳು ಮತ್ತು ಚಿಲ್ಲರೆ ವ್ಯಾಪಾರಿಗಳ ಭಾರೀ ಖರೀದಿಯ ಹಿನ್ನೆಲೆ ಚಿನ್ನದ ಬೆಲೆಯನ್ನು ಹೆಚ್ಚಿಸಿದೆ ಎಂದು ವರದಿ ಉಲ್ಲೇಖಿಸಿದೆ.(ಏಜೆನ್ಸೀಸ್)