ನ್ಯೂಸ್

ಇಳಿಕೆಯತ್ತ 'ಚಿನ್ನ'ದ ಚಿತ್ತ! ಕಳೆದ 1 ವಾರದಲ್ಲಿ ಎಷ್ಟು ಕಡಿಮೆಯಾಗಿದೆ? ಇಂದಿನ ಬೆಲೆ ಎಷ್ಟಿದೆ? ಹೀಗಿದೆ ವಿವರ | Gold Rate

Gold Rate: 1 ಲಕ್ಷ ರೂ. ಗಡಿದಾಟಿ ಹೋಗಿದ್ದ ಚಿನ್ನದ ಬೆಲೆ ಇದೀಗ ಮಂದಗತಿಯಲ್ಲಿ ಇಳಿಕೆ ಕಾಣುತ್ತಿದೆ. ಕೆಲವು ವಾರಗಳ ಹಿಂದಿನವರೆಗೂ ದಾಖಲೆಯ ಬೆಲೆಗಳನ್ನು ದಾಖಲಿಸುತ್ತಿದ್ದ ಚಿನ್ನ ಕ್ರಮೇಣವಾಗಿ ಕುಸಿಯುತ್ತಿರುವುದು ಮದುವೆ ಸೀಸನ್​ ಬಿಜಿಯಲ್ಲಿರುವ ಗ್ರಾಹಕರ ಮುಖದಲ್ಲಿ ಸಂತಸ ಮೂಡಿಸಿದೆ. ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಭುಗಿಲೆದ್ದ ದಿನದಿಂದಲೂ ಗೋಲ್ಡ್ ಬೆಲೆಯಲ್ಲಿ ತೀವ್ರ ಹೆಚ್ಚಳ ಕಂಡುಬಂದಿತ್ತು. ಆದರೆ, ಪ್ರಸ್ತುತ ಅಮೆರಿಕ ಮತ್ತು ಚೀನಾ ಸುಂಕ ಸಮರದಲ್ಲಿ ಹಿಂದೆ ಸರಿಯುತ್ತಿರುವುದರಿಂದ ಚಿನ್ನದ ದರ ಗಣನೀಯವಾಗಿ ಕಡಿಮೆಯಾಗಿದೆ ಎಂದು ತಜ್ಞರು ಹೇಳುತ್ತಾರೆ.

ಶೀಘ್ರವೇ ಇನ್ನಷ್ಟು ಕುಸಿತ

ಮುಂಬರುವ ವಾರಗಳಲ್ಲಿ ಚಿನ್ನದ ಬೆಲೆ ಮತ್ತಷ್ಟು ಕುಸಿಯುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ. ಇಂದು (ಜೂ.27) ಬೆಳಗ್ಗೆ ದಾಖಲಾದ ವಿವರಗಳ ಪ್ರಕಾರ, 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 930 ರೂ. ಕಡಿಮೆಯಾಗಿದ್ದು, 22 ಕ್ಯಾರೆಟ್ ಚಿನ್ನ 850 ರೂ. ಇಳಿದಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರವೂ ಕುಸಿದಿದೆ. ಒಂದು ಔನ್ಸ್ ಚಿನ್ನದ ಬೆಲೆ 40 ಡಾಲರ್​ನಷ್ಟು ಕಡಿಮೆಯಾಗಿ 3,293 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ಈ ಸಂದರ್ಭದಲ್ಲಿ, ಕಳೆದ ವಾರದಲ್ಲಿ ಚಿನ್ನದ ದರ ಸುಮಾರು 5,000 ರೂ.ನಷ್ಟು ಕಡಿಮೆಯಾಗಿದೆ. ಇದರೊಟ್ಟಿಗೆ ಬೆಳ್ಳಿ ಬೆಲೆಯೂ ಇಳಿದಿದೆ.

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ದರ ಎಷ್ಟಿದೆ?

  • ನವದೆಹಲಿಯಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 90,000 ರೂ. ಆಗಿದ್ದರೆ, 24 ಕ್ಯಾರೆಟ್ ಬೆಲೆ 98,170 ರೂ. ಆಗಿದೆ.
  • ಮುಂಬೈ, ಬೆಂಗಳೂರು, ಚೆನ್ನೈ ನಗರಗಳಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 89,850 ರೂ. ಆಗಿದ್ದರೆ, 24 ಕ್ಯಾರೆಟ್ ಬೆಲೆ 98,020 ರೂ. ಆಗಿದೆ.
  • ಇನ್ನು ಹೈದರಾಬಾದ್, ವಿಜಯವಾಡ, ವಿಶಾಖಪಟ್ಟಣದಲ್ಲಿ, 22 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ 89,850 ರೂ. ಇದ್ದರೆ, 24 ಕ್ಯಾರೆಟ್ ಬೆಲೆ 98,020 ರೂ. ಆಗಿದೆ.

ಹೀಗಿದೆ ಬೆಳ್ಳಿ ಬೆಲೆ

  • ದೆಹಲಿ, ಮುಂಬೈ ಮತ್ತು ಬೆಂಗಳೂರು ನಗರಗಳಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 1,07,000 ರೂ. ಆಗಿದೆ.
  • ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿಯ ಬೆಲೆ 1,17,900 ರೂ. ಆಗಿದೆ.
  • ಹೈದರಾಬಾದ್, ವಿಜಯವಾಡ ಮತ್ತು ವಿಶಾಖಪಟ್ಟಣದಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 1,17,900 ರೂ. ಇದೆ,(ಏಜೆನ್ಸೀಸ್).

ಗಮನಿಸಿ: ಮೇಲೆ ತಿಳಿಸಲಾದ ಬೆಲೆಗಳು ಬೆಳಗಿನ ಮಾರುಕಟ್ಟೆಯ ಆರಂಭದಲ್ಲಿ ಮಾತ್ರ. ಈ ಚಿನ್ನ ಮತ್ತು ಬೆಳ್ಳಿ ದರಗಳು ಬದಲಾವಣೆಗೆ ಒಳಪಟ್ಟಿರುತ್ತವೆ. ದಯವಿಟ್ಟು ಗಮನಿಸಿ.