ನ್ಯೂಸ್

1 ಲಕ್ಷ ರೂ.ನಿಂದ ಇಳಿಕೆಯತ್ತ ಚಿನ್ನ! ಬೆಳ್ಳಿ ಬೆಲೆ ಕೂಡ ಕುಸಿತ; ಎಲ್ಲೆಲ್ಲಿ ಎಷ್ಟು ಇಳಿಕೆ? ಹೀಗಿದೆ ನೋಡಿ ವಿವರ | Gold

ಮೋಹನ್​ ಶೆಟ್ಟಿ

Gold Rate: ಮದುವೆ ಮತ್ತು ಶುಭಾರಂಭ ಕಾರ್ಯಗಳ ಬಿಜಿಯಲ್ಲಿರುವ ಚಿನ್ನದ ಗ್ರಾಹಕರಿಗೆ ಸದ್ಯ ಬೆಲೆ ಏರಿಕೆ ಭಾರೀ ತಲೆಬಿಸಿ ತಂದೊಡ್ಡಿದೆ. ಕಳೆದ ಕೆಲವು ದಿನಗಳಿಂದ ಸತತವಾಗಿ ಏರಿಕೆಯಾಗುತ್ತಿರುವ ಗೋಲ್ಡ್​ ದರ, ಗ್ರಾಹಕರನ್ನು ಕಂಗಾಲಾಗಿಸಿದೆ. ಒಂದು ಲಕ್ಷ ರೂ. ಗಡಿದಾಟಿ ಹೋಗಿರುವ ಚಿನ್ನ ಕಳೆದ ಮೂರು ದಿನಗಳಿಂದ ಇಳಿಕೆಯತ್ತ ಮುಖಮಾಡಿದೆ. ಇಂದೂ ಸಹ ಚಿನ್ನದ ಬೆಲೆ ಕುಸಿದಿದ್ದು, ಕೊಳ್ಳುವವರ ಮುಖದಲ್ಲಿ ಮಂದಹಾಸ ಮೂಡಿಸಿದೆ.

ಅಂತಾರಾಷ್ಟ್ರೀಯ ಉದ್ವಿಗ್ನತೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೂಡಿಕೆದಾರರು ಚಿನ್ನದ ಮೇಲಿನ ಹೂಡಿಕೆಯನ್ನು ಕೈಬಿಡುತ್ತಿದ್ದಾರೆ. ಹೂಡಿಕೆದಾರರು ಇತರ ಅಂಶಗಳತ್ತ ನೋಡುತ್ತಿರುವುದೇ ಇದೀಗ ಚಿನ್ನದ ಬೆಲೆಯಲ್ಲಿನ ಕ್ರಮೇಣ ಕುಸಿತಕ್ಕೆ ಕಾರಣವಾಗಿದೆ ಎಂದು ತಜ್ಞರು ಭವಿಷ್ಯ ನುಡಿದಿದ್ದಾರೆ.

ಶನಿವಾರ (ಜು.26) ಬೆಳಗ್ಗೆ ದಾಖಲಾದ ವಿವರಗಳ ಪ್ರಕಾರ, 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 550 ರೂ. ಕುಸಿದಿದ್ದರೆ, 22 ಕ್ಯಾರೆಟ್ ಚಿನ್ನ 500 ರೂ. ಇಳಿದಿದೆ. ಇದರೊಂದಿಗೆ, ಕಳೆದ ಮೂರು ದಿನಗಳಲ್ಲಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ಸುಮಾರು 2,400 ರೂ. ಇಳಿಕೆ ಕಂಡಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರವೂ ಕಡಿಮೆಯಾಗಿದೆ. ಒಂದು ಔನ್ಸ್ ಚಿನ್ನದ ಬೆಲೆ 33 ಡಾಲರ್​ನಷ್ಟು ಕುಸಿದಿದೆ. ಒಂದು ಔನ್ಸ್ ಚಿನ್ನದ ಬೆಲೆ ಪ್ರಸ್ತುತ 3,336 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ದರ

  • ನವದೆಹಲಿಯಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 91,750 ರೂ. ಆಗಿದ್ದರೆ, 24 ಕ್ಯಾರೆಟ್ ಬೆಲೆ 1,00,080. ರೂ. ಆಗಿದೆ.
  • ಮುಂಬೈ, ಬೆಂಗಳೂರು, ಚೆನ್ನೈ ನಗರಗಳಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 91,600 ರೂ. ಆಗಿದ್ದರೆ, 24 ಕ್ಯಾರೆಟ್ ಬೆಲೆ 99,930 ರೂ. ಆಗಿದೆ.
  • ಇನ್ನು ಹೈದರಾಬಾದ್, ವಿಜಯವಾಡ, ವಿಶಾಖಪಟ್ಟಣದಲ್ಲಿ, 22 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ 91,600 ರೂ. ಇದ್ದರೆ, 24 ಕ್ಯಾರೆಟ್ ಬೆಲೆ 99,930 ರೂ. ಆಗಿದೆ.

ಬೆಳ್ಳಿ 2,000 ರೂ. ಇಳಿಕೆ

  • ದೆಹಲಿ, ಮುಂಬೈ ಮತ್ತು ಬೆಂಗಳೂರು ನಗರಗಳಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 1,16,000 ರೂ. ಆಗಿದೆ.
  • ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿಯ ಬೆಲೆ 1,26,000 ರೂ. ಆಗಿದೆ.
  • ಹೈದರಾಬಾದ್, ವಿಜಯವಾಡ ಮತ್ತು ವಿಶಾಖಪಟ್ಟಣದಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 1,26,000 ರೂ. ಇದೆ,(ಏಜೆನ್ಸೀಸ್).

ಗಮನಿಸಿ: ಮೇಲೆ ತಿಳಿಸಲಾದ ಬೆಲೆಗಳು ಬೆಳಗಿನ ಮಾರುಕಟ್ಟೆಯ ಆರಂಭದಲ್ಲಿ ಮಾತ್ರ. ಈ ಚಿನ್ನ ಮತ್ತು ಬೆಳ್ಳಿ ದರಗಳು ಬದಲಾವಣೆಗೆ ಒಳಪಟ್ಟಿರುತ್ತವೆ. ದಯವಿಟ್ಟು ಗಮನಿಸಿ.