ನ್ಯೂಸ್

ಟ್ರಂಪ್​ ಸುಂಕ ಸಮರದ ಬೆನ್ನಲ್ಲೇ ಚಿನ್ನ ಏರಿಕೆ! ಒಂದೇ ದಿನದಲ್ಲಿ ಭಾರೀ ಹೆಚ್ಚಳ, ಹೀಗಿದೆ ಇಂದಿನ ದರ ಪಟ್ಟಿ | Gold

ಮೋಹನ್​ ಶೆಟ್ಟಿ

Gold Rates: ಚಿನ್ನ ಖರೀದಿಸಲು ಹಪಾಹಪಿಯಲ್ಲಿರುವ ಗ್ರಾಹಕರಿಗೆ ಒಂದಲ್ಲ ಒಂದು ಬೇಸರದ ಸುದ್ದಿ ಎದುರಾಗುತ್ತಲೇ ಇದೆ. ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆ ಇಳಿಕೆ ಕಾಣುತ್ತಿದ್ದು, ಇನ್ನಷ್ಟು ಕಡಿಮೆಯಾಗುವ ಲಕ್ಷಣಗಳು ಗೋಚರಿಸಿತ್ತು. ಆದರೆ, ಅಷ್ಟರೊಳಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ ಸುಂಕ ಸಮರ ಮತ್ತೇ ಏರಿಕೆ ಸಾಧ್ಯತೆಗಳ ಮುನ್ಸೂಚನೆಯನ್ನು ನೀಡಿದೆ.

ಭಾರತದ ಮೇಲೆ ಶೇ.25ರಷ್ಟು ಸುಂಕ ವಿಧಿಸಿರುವ ಟ್ರಂಪ್​, ಇತರೆ ದೇಶಗಳ ಮೇಲೂ ಸುಂಕ ಸಮರ ಸಾಧಿಸಿದ್ದಾರೆ. ಈ ಬೆಳವಣಿಗೆಯ ಬೆನ್ನಲ್ಲೇ ಗೋಲ್ಡ್​ ಬೆಲೆಯಲ್ಲಿ ಭಾರಿ ಬದಲಾವಣೆಗಳು ಕಂಡುಬಂದಿವೆ. ಕಳೆದ ಮೂರು ದಿನಗಳಿಂದ ತೀವ್ರವಾಗಿ ಕುಸಿಯುತ್ತಿದ್ದ ಚಿನ್ನದ ಬೆಲೆ ಶನಿವಾರ ತೀವ್ರ ಏರಿಕೆಯಾಗಿದೆ. ಇಂದು (ಆ.02) ಬೆಳಗ್ಗೆ ದಾಖಲಾದ ವಿವರಗಳ ಪ್ರಕಾರ, 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 1,530 ರೂ. ಏರಿಕೆ ಕಂಡರೆ, 22 ಕ್ಯಾರೆಟ್ ಚಿನ್ನ 1,400 ರೂ. ಏರಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರವೂ ಗಣನೀಯವಾಗಿ ಏರಿಕೆಯಾಗಿದೆ. ಒಂದು ಔನ್ಸ್ ಚಿನ್ನದ ಬೆಲೆ 65 ಡಾಲರ್​ನಷ್ಟು ಏರಿಕೆಯಾಗಿದೆ. ಇದರೊಂದಿಗೆ, ಒಂದು ಔನ್ಸ್ ಚಿನ್ನದ ಬೆಲೆ 3,363 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ಮುಂಬರುವ ವಾರಗಳಲ್ಲಿ ಚಿನ್ನದ ದರ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಜ್ಞರು ಭವಿಷ್ಯ ನುಡಿದಿದ್ದಾರೆ. ಆದರೆ, ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ.

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ದರ

  • ನವದೆಹಲಿಯಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 93,050 ರೂ. ಆಗಿದ್ದರೆ, 24 ಕ್ಯಾರೆಟ್ ಬೆಲೆ 1,01,500. ರೂ. ಆಗಿದೆ.
  • ಮುಂಬೈ, ಬೆಂಗಳೂರು, ಚೆನ್ನೈ ನಗರಗಳಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 92,900 ರೂ. ಆಗಿದ್ದರೆ, 24 ಕ್ಯಾರೆಟ್ ಬೆಲೆ 1,01,350 ರೂ. ಆಗಿದೆ.
  • ಇನ್ನು ಹೈದರಾಬಾದ್, ವಿಜಯವಾಡ, ವಿಶಾಖಪಟ್ಟಣದಲ್ಲಿ, 22 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ 92,900 ರೂ. ಇದ್ದರೆ, 24 ಕ್ಯಾರೆಟ್ ಬೆಲೆ 1,01,350 ರೂ. ಆಗಿದೆ.

ಬೆಳ್ಳಿ ಬೆಲೆ ಇಳಿಕೆ

  • ದೆಹಲಿ, ಮುಂಬೈ ಮತ್ತು ಬೆಂಗಳೂರು ನಗರಗಳಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 1,13,000 ರೂ. ಆಗಿದೆ.
  • ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿಯ ಬೆಲೆ 1,23,000 ರೂ. ಆಗಿದೆ.
  • ಹೈದರಾಬಾದ್, ವಿಜಯವಾಡ ಮತ್ತು ವಿಶಾಖಪಟ್ಟಣದಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 1,23,000 ರೂ. ಇದೆ,(ಏಜೆನ್ಸೀಸ್).

ಗಮನಿಸಿ: ಮೇಲೆ ತಿಳಿಸಲಾದ ಬೆಲೆಗಳು ಬೆಳಗಿನ ಮಾರುಕಟ್ಟೆಯ ಆರಂಭದಲ್ಲಿ ಮಾತ್ರ. ಈ ಚಿನ್ನ ಮತ್ತು ಬೆಳ್ಳಿ ದರಗಳು ಬದಲಾವಣೆಗೆ ಒಳಪಟ್ಟಿರುತ್ತವೆ. ದಯವಿಟ್ಟು ಗಮನಿಸಿ.