ನ್ಯೂಸ್

ಇಂದು ಏರಿಕೆಯತ್ತ ಸಾಗಿದ ಸ್ವರ್ಣ; ದೇಶದ ಪ್ರಮುಖ ನಗರಗಳಲ್ಲಿ ಹೀಗಿದೆ ಇಂದಿನ ಚಿನ್ನ-ಬೆಳ್ಳಿ ದರ | Gold Rates

Gold Rates: ಕಳೆದ ಒಂದು ವಾರದಲ್ಲಿ ಚಿನ್ನದ ಬೆಲೆ ಏರಿಕೆಯತ್ತಲೇ ಮುಖಮಾಡಿದೆ. ಮತ್ತೇ ಗೋಲ್ಡ್​ ದರ ಗಗನಕ್ಕೇರುತ್ತಿದೆ. ಇದು ಹೊಸ ದಾಖಲೆಗಳನ್ನು ನಿರ್ಮಿಸುತ್ತಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕ ಮತ್ತು ಅಂತಾರಾಷ್ಟ್ರೀಯ ಉದ್ವಿಗ್ನತೆಯ ಪರಿಣಾಮದಿಂದಾಗಿ ಸದ್ಯ ಚಿನ್ನದ ಬೆಲೆಯಲ್ಲಿ ಏರಿಕೆ ಕಾಣಿಸುತ್ತಿದೆ. ಹಾಗಿದ್ದರೆ, ಇಂದು 10 ಗ್ರಾಂ 24 ಕ್ಯಾರೆಟ್​ ಸ್ವರ್ಣದ ಬೆಲೆ ಎಷ್ಟಾಗಿದೆ? ದೇಶದ ಪ್ರಮುಖ ನಗರಗಳಲ್ಲಿ ಎಷ್ಟಿದೆ? ಎಂಬುದರ ವಿವರ ಹೀಗಿದೆ ಗಮನಿಸಿ.

ಸೋಮವಾರ (ಸೆ.01) ಚಿನ್ನದ ಬೆಲೆ ಗಣನೀಯವಾಗಿ ಏರಿಕೆಯಾಗಿದೆ. ಬೆಳಗ್ಗೆ ದಾಖಲಾದ ವಿವರಗಳ ಪ್ರಕಾರ, 24 ಕ್ಯಾರೆಟ್ ಚಿನ್ನದ 10 ಗ್ರಾಂ 930 ರೂ. ಏರಿಕೆಯಾಗಿದ್ದರೆ, 22 ಕ್ಯಾರೆಟ್ ಚಿನ್ನದ ಬೆಲೆ 850 ರೂ. ಹೆಚ್ಚಿದೆ. ಇದರೊಂದಿಗೆ, ಕಳೆದ ವಾರದಲ್ಲಿ (ಅಂದರೆ ಆಗಸ್ಟ್ 26 ರಿಂದ) 24 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ ಸುಮಾರು 4,500 ರೂ. ಹೆಚ್ಚಾಗಿದೆ.

ಮತ್ತೊಂದೆಡೆ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರವೂ ಏರಿಕೆಯಾಗಿದೆ. ಒಂದು ಔನ್ಸ್ ಚಿನ್ನದ ಬೆಲೆ 39 ಡಾಲರ್ ಹೆಚ್ಚಾಗಿದೆ. ಪ್ರಸ್ತುತ ಒಂದು ಔನ್ಸ್ ಚಿನ್ನದ ಬೆಲೆ 3,486 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ಇದರೊಂದಿಗೆ, ಬೆಳ್ಳಿ ಬೆಲೆಯೂ ಹೆಚ್ಚಾಗಿದೆ. ಭಾರತದಲ್ಲಿ, ಒಂದು ಕೆಜಿ ಬೆಳ್ಳಿ 1,000 ರೂ. ಏರಿಕೆಯಾಗಿದೆ.

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ದರ

  • ನವದೆಹಲಿಯಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 97,200 ರೂ. ಆಗಿದ್ದರೆ, 24 ಕ್ಯಾರೆಟ್ ಬೆಲೆ 1,06,030 ರೂ. ಆಗಿದೆ.
  • ಮುಂಬೈ, ಬೆಂಗಳೂರು, ಚೆನ್ನೈ ನಗರಗಳಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 97,050 ರೂ. ಆಗಿದ್ದರೆ, 24 ಕ್ಯಾರೆಟ್ ಬೆಲೆ 1,05,880 ರೂ. ಆಗಿದೆ.
  • ಇನ್ನು ಹೈದರಾಬಾದ್, ವಿಜಯವಾಡ, ವಿಶಾಖಪಟ್ಟಣದಲ್ಲಿ, 22 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ 97,050 ರೂ. ಇದ್ದರೆ, 24 ಕ್ಯಾರೆಟ್ ಬೆಲೆ 1,05,880 ರೂ. ಆಗಿದೆ.

ಬೆಳ್ಳಿ ಬೆಲೆ 1,000 ರೂ. ಏರಿಕೆ

  • ದೆಹಲಿ, ಮುಂಬೈ ಮತ್ತು ಬೆಂಗಳೂರು ನಗರಗಳಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 1,26,000 ರೂ. ಆಗಿದೆ.
  • ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿಯ ಬೆಲೆ 1,36,000 ರೂ. ಆಗಿದೆ.
  • ಹೈದರಾಬಾದ್, ವಿಜಯವಾಡ ಮತ್ತು ವಿಶಾಖಪಟ್ಟಣದಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 1,36,000 ರೂ. ಇದೆ,(ಏಜೆನ್ಸೀಸ್).

ಗಮನಿಸಿ: ಮೇಲೆ ತಿಳಿಸಲಾದ ಬೆಲೆಗಳು ಬೆಳಗಿನ ಮಾರುಕಟ್ಟೆಯ ಆರಂಭದಲ್ಲಿ ಮಾತ್ರ. ಈ ಚಿನ್ನ ಮತ್ತು ಬೆಳ್ಳಿ ದರಗಳು ಬದಲಾವಣೆಗೆ ಒಳಪಟ್ಟಿರುತ್ತವೆ. ದಯವಿಟ್ಟು ಗಮನಿಸಿ.