Gold Price: ಆಷಾಢ ಮಾಸದಲ್ಲಿ ಸ್ವಲ್ಪ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಇದೀಗ ಶ್ರಾವಣ ಮಾಸದಲ್ಲಿ ದಿಢೀರ್ ಏರಿಕೆಯಾಗಿದೆ. ಕಳೆದ ಐದು ದಿನಗಳಲ್ಲಿ ಚಿನ್ನದ ಬೆಲೆ ಗಗನದತ್ತ ಮುಖಮಾಡಿದ್ದು, ಗಣನೀಯವಾಗಿ ಹೆಚ್ಚುತ್ತಲೇ ಇದೆ. ಇದಕ್ಕೆ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿನ ಬೆಳವಣಿಗೆ ಮತ್ತು ಟ್ರಂಪ್ ಸುಂಕ ಸಮರವೇ ಬಲವಾದ ಕಾರಣ. ಆಗಸ್ಟ್ 2ರಿಂದ ಇವತ್ತಿನವರೆಗೆ ಚಿನ್ನದ ಬೆಲೆಯಲ್ಲಿ 2,500 ರೂ. ಹೆಚ್ಚಾಗಿದೆ.
ಇದನ್ನೂ ಓದಿ: ಕೈಕಾಲಿನಲ್ಲಿ ಈ ಲಕ್ಷಣಗಳು ಕಾಣಿಸಿಕೊಂಡ್ರೆ ಸ್ಟ್ರೋಕ್ ಮುನ್ಸೂಚನೆಯೇ? ನೀವು ತಿಳಿಯಬೇಕಾದ ಸಂಗತಿಯಿದು | Paralysis
ಬುಧವಾರ (ಆ.06) ಬೆಳಗ್ಗೆ ದಾಖಲಾದ ವಿವರಗಳ ಪ್ರಕಾರ, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 110 ರೂ. ಏರಿಕೆಯಾದರೆ, 22 ಕ್ಯಾರೆಟ್ ಚಿನ್ನ 100 ರೂ. ಏರಿಕೆಗೊಂಡಿದೆ. ಆದರೆ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಕಡಿಮೆಯಾಗಿದೆ. ಒಂದು ಔನ್ಸ್ ಚಿನ್ನದ ಬೆಲೆ ಒಂಬತ್ತು ಡಾಲರ್ ಕಡಿಮೆಯಾಗಿದೆ. ಪ್ರಸ್ತುತ, ಒಂದು ಔನ್ಸ್ ಚಿನ್ನ 3,371 ಡಾಲರ್‌ಗಳಲ್ಲಿ ವಹಿವಾಟು ನಡೆಸುತ್ತಿದೆ. ಮತ್ತೊಂದೆಡೆ, ಬೆಳ್ಳಿ ದರವೂ ಹೆಚ್ಚಾಗಿದೆ. ಒಂದು ಔನ್ಸ್ ಬೆಳ್ಳಿ 1,000 ರೂ. ಹೆಚ್ಚಳ ಕಂಡಿದೆ.
ಗಮನಿಸಿ: ಮೇಲೆ ತಿಳಿಸಲಾದ ಬೆಲೆಗಳು ಬೆಳಗಿನ ಮಾರುಕಟ್ಟೆಯ ಆರಂಭದಲ್ಲಿ ಮಾತ್ರ. ಈ ಚಿನ್ನ ಮತ್ತು ಬೆಳ್ಳಿ ದರಗಳು ಬದಲಾವಣೆಗೆ ಒಳಪಟ್ಟಿರುತ್ತವೆ. ದಯವಿಟ್ಟು ಗಮನಿಸಿ.