ನ್ಯೂಸ್

ಗುದನಾಳದಲ್ಲಿ ಚಿನ್ನಾಭರಣ ಬಚ್ಚಿಟ್ಟು ಸಾಗಾಟ; ತಪಾಸಣೆ ವೇಳೆ ಸಿಕ್ಕಿಬಿದ್ದ ಪ್ರಯಾಣಿಕ!

ಹೈದರಾಬಾದ್: ಇತ್ತೀಚಿನ ದಿನಗಳಲ್ಲಿ ವಿಮಾನ ನಿಲ್ದಾಣದಲ್ಲಿ ಕಳ್ಳ ಸಾಗಾಣಿಕೆ ಮಾಡಿ ಸಿಕ್ಕಿಬಿದ್ದ ಪ್ರಕರಣಗಳು ಹೆಚ್ಚಾಗಿಯೇ ನಡೆಯುತ್ತಿದೆ. ಹೀಗಿರುವಾಗ ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಗುದನಾಳದಲ್ಲಿ ಬಚ್ಚಿಟ್ಟ 42.2 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಪ್ರಯಾಣಿಕನೊಬ್ಬನನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

42.26 ಲಕ್ಷ ರೂ. ಮೌಲ್ಯದ 679 ಗ್ರಾಂ ಚಿನ್ನಾಭರಣವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಯಾಣಿಕರೊಬ್ಬರನ್ನು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ರಿಯಾದ್‌ನಿಂದ ವಿಮಾನದಲ್ಲಿ ಆಗಮಿಸಿದ ಪ್ರಯಾಣಿಕರು ಗುದನಾಳದಲ್ಲಿ ನಾಲ್ಕು ಕ್ಯಾಪ್ಸುಲ್‌ಗಳ (ಮಾತ್ರೆ) ರೂಪದಲ್ಲಿ ಚಿನ್ನವನ್ನು ಬಚ್ಚಿಟ್ಟಿದ್ದರು ಎಂದು ವರದಿಯಾಗಿದೆ. ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಅನುಮಾನ ಬಂದ ಮೇಲೆ ತಪಾಸಣೆ ನಡೆಸಿ ಚಿನ್ನವನ್ನು ವಶಪಡಿಸಿಕೊಂಡಿದ್ದೇವೆ. ವಶಪಡಿಸಿಕೊಂಡ ಚಿನ್ನದ ಮೌಲ್ಯ 42,26,775 ರೂ. ಆಗಿದೆ. ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದ್ದು, ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.