ಬೆಂಗಳೂರು ಕಳೆದ 6 ವರ್ಷಗಳಿಂದ (2018) ಸ್ಥಗಿತವಾಗಿದ್ದ ಗೋಲ್ಡನ್ ಚಾರಿಯೇಟ್ (ಸುವರ್ಣ ರಥ) ರೈಲು ಪ್ರವಾಸಕ್ಕೆ ಶನಿವಾರ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಮರು ಚಾಲನೆ ನೀಡಿದರು.
ಶೇ.50 ಭಾರತೀಯ ರೈಲ್ವೇ, ಶೇ.25 ಪ್ರವಾಸೋದ್ಯಮ ಸಚಿವಾಲಯ ಭಾರತ ಸರ್ಕಾರ ಹಾಗೂ ಕೆಎಸ್ಟಿಡಿಸಿಯ ಶೇ. 25ರಷ್ಟು ಷೇರುಗಳನ್ನು ರಾಜ್ಯ ಸರ್ಕಾರ ಹೊಂದಿದೆ.
ರೈಲಿನ ಒಳಾಂಗಣವನ್ನು ಕಲಾತ್ಮಕವಾಗಿ ನಿರ್ಮಿಸಲಾಗಿದೆ. 18 ಕೋಚ್‌ಗಳಲ್ಲಿ ಕರ್ನಾಟಕ ಆಳಿದ ರಾಜಮನೆತನಗಳಾದ ಕದಂಬ, ಹೊಯ್ಸಳ, ವಿಜಯನಗರ ಚಾಲುಕ್ಯರ ಹೆಸರನ್ನು ಇಡಲಾಗಿದೆ.
ಬಳಿಕ ಮಾತನಾಡಿದ ಸಚಿವರು, ಕರ್ನಾಟಕ ಸೇರಿ ದಕ್ಷಿಣ ಭಾರತದ ಶ್ರೀಮಂತ ಸಂಸ್ಕೃತಿ, ಪರಂಪರೆ ಹಾಗೂ ಐತಿಹಾಸಿಕ ಸ್ಥಳಗಳ ಅನಾವರಣಕ್ಕೆ ಮುಕುಟಪ್ರಾಯವೆನಿಸಿದೆ. ಈ ಗೋಲ್ಡನ್ ಚಾರಿಯೇಟ್ ರೈಲು ಸೇವೆಗಳು 2018ರಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು, ಅದನ್ನು ಮರುಚಾಲನೆ ನೀಡಲಾಗಿದೆ ಎಂದರು.
ಊಟ, ವಸತಿಗೆ ಐಷಾರಾಮಿ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರವಾಸೋದ್ಯಮ ವಿಶ್ವದ ಪ್ರಸಿದ್ಧ ಪರಂಪರೆಯ ತಾಣಗಳ ಜತೆಗೆ ಪಶ್ಚಿಮ ಘಟ್ಟಗಳು, ಪ್ರಾಚೀನ ಕಡಲತೀರಗಳು, ಸಾಂಸ್ಕೃತಿಕ ತಾಣಗಳಿಗೆ ಪ್ರವಾಸಿಗರನ್ನು ಕರೆದೊಯ್ಯುತ್ತದೆ. ಇದರಿಂದ ರೈಲು ಹೋಟೆಲ್ಗಳು, ಕುಶಲಕರ್ಮಿಗಳು, ಪ್ರವಾಸ ನಿರ್ವಾಹಕರಿಗೆ ಆದಾಯ ಕಲ್ಪಿಸಿದಂತಾಗುತ್ತದೆ. ಈ ವಿಶೇಷ ರೈಲು ಪ್ರವಾಸ ಜಾಗತಿಕ ಮಟ್ಟದಲ್ಲಿ ವಿಶ್ವದ ಏಳು ಅತ್ಯುತ್ತಮ ಐಷಾರಾಮಿ ರೈಲು ಪ್ರಯಾಣಗಳಲ್ಲಿ ಗುರುತಿಸಲಾಗಿದ್ದು, ಹಲವಾರು ಪ್ರಶಸ್ತಿ ಪಡೆದುಕೊಂಡಿದೆ ಎಂದರು.
ಈ ರೈಲಿನಲ್ಲಿ 44 ಸುಸುಜ್ಜಿತ ಕ್ಯಾಬಿನ್‌ಗಳು, ಎನ್ ಸೂಟ್ ಸ್ನಾನಗೃಹ, ವೈಫೈ ಸಹ ಒಳಗೊಂಡಿದೆ. ರುಚಿ ಮತ್ತು ನಳಪಾಕ ಹೆಸರಿನ ಎರಡು ಹೋಟೆಲ್ಗಳು ಭಾರತೀಯ ಮತ್ತು ಅಂತಾರಾಷ್ಟ್ರೀಯ ಪಾಕಪದ್ದತಿ ಸೇವೆ ನೀಡುತ್ತದೆ. ಲಾಂಜ್ ಬಾರ್, ಫಿಟ್ನೆಸ್ ಸೆಂಟರ್ ಸೌಕರ್ಯಗಳನ್ನು ಕಲ್ಪಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಸಲ್ಮಾ ಕೆ. ಫಾಹಿಮ್, ನಿರ್ದೇಶಕ ದೇವರಾಜ್, ಕೆಎಸ್‌ಟಿಡಿಸಿ ಅಧ್ಯಕ್ಷ ಎಂ. ಶ್ರೀನಿವಾಸ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ್ ಉಪಸ್ಥಿತರಿದ್ದರು.
ಡಿ.21 ರಿಂದ 26ರವರೆಗೆ ಬೆಂಗಳೂರಿನಿಂದ ಆರಂಭಗೊಂಡು ಮೈಸೂರು, ಕಾಂಚೀಪುರಂ, ಮಹಾಬಲಿಪುರಂ, ತಂಜಾವೂರು, ಕೊಚ್ಚಿನ್, ಮರಾರಿಕುಲಂಗೆ ತೆರಳಿ ನಂತರ ಬೆಂಗಳೂರಿಗೆ ಹಿಂದಿರುಗುತ್ತದೆ. ಇದು ಐದು ದಿನಗಳ ಪ್ರವಾಸವಾಗಿದ್ದು, ಇದಕ್ಕೆ ತಗಲುವ ವೆಚ್ಚ ಒಬ್ಬರಿಗೆ 4,07,700 ರೂ.ಗಳಾಗಿದೆ.
ಹೆಮ್ಮೆಯ ಕರ್ನಾಟಕ ಪ್ರವಾಸವು 2025ರ ೆ.1ರಿಂದ ೆ.6ರವರೆಗೆ ಬೆಂಗಳೂರಿನಿಂದ - ನಂಜನಗೂಡು- ಮೈಸೂರು- ಹಳೇಬೀಡು, ಚಿಕ್ಕಮಗಳೂರು, ಹೊಸಪೇಟೆ-ಗೋವಾ- ಬೆಂಗಳೂರನ್ನು ಒಳಗೊಂಡಿದ್ದು ಇದಕ್ಕೆ ತಗಲುವ ವೆಚ್ಚ 2,71,800 ರೂ.ಗಳಾಗಿವೆ.
ಸೋಜರ್ನ್ ಆ್ ಸೌತ್ ಚಾರ್ಟರ್ಡ್ ಪ್ರವಾಸವನ್ನು ಡಿ.29ರಿಂದ ೆ.2ರವರೆಗೆ ಆಯೋಜಿಸಲಾಗಿದೆ.