ನ್ಯೂಸ್

Karnataka Budget: ಅತಿಥಿ ಶಿಕ್ಷಕರಿಗೆ, ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ಕೊಟ್ಟ ಸಿಎಂ! ಮಾಸಿಕ ಗೌರವ ಧನ ಹೆಚ್ಚಳ

State Budget: ಇಂದು (ಮಾ.07) ಬಹುನಿರೀಕ್ಷಿತ ರಾಜ್ಯ ಬಜೆಟ್​ (2025-26) ಆಯವ್ಯಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ್ದಾರೆ. ಈ ಮೂಲಕ 16ನೇ ಬಜೆಟ್ ಮಂಡಿಸಿದ ದಾಖಲೆಯನ್ನೂ ಬರೆದಿದ್ದಾರೆ. ಕಳೆದ ಬಾರಿಗಿಂತ ಈ ಬಾರಿಯ ಬಜೆಟ್ ಗಾತ್ರ ಶೇ.10ರಷ್ಟು ವೃದ್ಧಿಯೊಂದಿಗೆ 4.15 ಲಕ್ಷ ಕೋಟಿ ರೂ. ದಾಟುವ ಸಾಧ್ಯತೆಯಿದೆ.

ಕುವೆಂಪು ಕವಿತೆ ಮೂಲಕ ಇಂದಿನ ರಾಜ್ಯ ಬಜೆಟ್ ಆರಂಭಿಸಿದ ಸಿಎಂ ಸಿದ್ದರಾಮಯ್ಯ, ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕರಿಗೆ ಮಾಸಿಕ ಗೌರವ ಧನ ಹೆಚ್ಚಿಸಿದ ಸಿಎಂ ಸಿದ್ದರಾಮಯ್ಯ, ತಿಂಗಳಿಗೆ ಎರಡು ಸಾವಿರ ರೂ. ಹೆಚ್ಚಳ ಮಾಡಿದ್ದಾರೆ. ಇನ್ನೂ ಬಿಸಿಯೂಟ ಕಾರ್ಯಕರ್ತೆಯರ ಗೌರವ ಧನವನ್ನು ಸಹ ಹೆಚ್ಚಿಸಿರುವ ಸಿಎಂ, ಮಾಸಿಕ 1000 ರೂ. ಕೊಡುವುದಾಗಿ ಬಜೆಟ್​ನಲ್ಲಿ ಘೋಷಿಸಿದ್ದಾರೆ.