ಬೆಂಗಳೂರು: ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕೂಲಿಕಾರರಿಗೆ ಅಕುಶಲ ಕೆಲಸ ಒದಗಿಸುವುದರ ಜತೆಗೆ ಲಾನುಭವಿಗಳ ಜೀವನಾಧಾರಕ್ಕೆ ನೆರವಾಗುವ ವೈಯಕ್ತಿಕ ಕಾಮಗಾರಿಗಳಿಗೆ ನೀಡುತ್ತಿದ್ದ 2.50 ಲಕ್ಷ ರೂ. ಮೊತ್ತವನ್ನು 5 ಲಕ್ಷ ರೂ.ಗೆ ಹೆಚ್ಚಿಸಿ ಸರ್ಕಾರ ಆದೇಶಿಸಿದೆ.
ನರೇಗಾದಡಿ ವೈಯಕ್ತಿಕ ಕಾಮಗಾರಿ ಮೊತ್ತ ಹೆಚ್ಚಿಸುವ ಮೂಲಕ ಲಾನುಭವಿಗಳ ಆರ್ಥಿಕ ಪರಿಸ್ಥಿತಿ ಉತ್ತಮಪಡಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ.
ಪರಿಶಿಷ್ಟ ಜಾತಿ, ಪಂಗಡ, ಅಲೆಮಾರಿ ಬುಡಕಟ್ಟುಗಳು, ಅಧಿಸೂಚನೆಯಿಂದ ಕೈಬಿಟ್ಟ ಬುಡಕಟ್ಟುಗಳು, ಬಡತನರೇಖೆಗಿಂತ ಕೆಳಗಿರುವ ಕುಟುಂಬಗಳು, ಮಹಿಳಾ ಪ್ರಧಾನ ಕುಟುಂಬಗಳು, ವಿಕಲಚೇತನ ಕುಟುಂಬಗಳು, ಭೂ ಸುಧಾರಣಾ ಲಾನುಭವಿಗಳು, ವಸತಿ ಯೋಜನೆಯ ಲಾನುಭವಿಗಳು, ಅರಣ್ಯ ಹಕ್ಕು ಕಾಯ್ದೆ 2006ರ ಲಾನುಭವಿಗಳು ಹಾಗೂ ಸಣ್ಣ ಮತ್ತು ಅತಿ ಸಣ್ಣ ರೈತರು ಈ ಯೋಜನೆಯ ಲಾನುಭವಿಗಳಾಗಿದ್ದಾರೆ ಎಂದು ಅಧಿಕೃತ ಜ್ಞಾಪನಾ ಪತ್ರದಲ್ಲಿ ತಿಳಿಸಲಾಗಿದೆ.
ಈ ಯೋಜನೆಯಡಿ ನೋಂದಾಯಿತ ಒಂದು ಅರ್ಹ ಕುಟುಂಬ ತನ್ನ ಜೀವಿತಾವಧಿಯಲ್ಲಿ ಗರಿಷ್ಠ 5 ಲಕ್ಷ ರೂ.ಗಳವರೆಗೆ ನೀಡಲಾಗುವ ವೈಯಕ್ತಿಕ ಕಾಮಗಾರಿ ಸೌಲಭ್ಯ ಪಡೆದುಕೊಳ್ಳಬಹುದು ಎಂದು ಹೇಳಲಾಗಿದೆ.