ಬೆಂಗಳೂರು: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೋದಿ 3.0 ಸರ್ಕಾರದ ಮೊದಲ ಬಜೆಟ್ ಮಂಡಿಸಿದ್ದಾರೆ. ಕೃಷಿ, ಉದ್ಯೋಗ, ಶಿಕ್ಷಣ, ರಸ್ತೆ ಅಭಿವೃದ್ಧಿ ಹೀಗೆ ಮುಂತಾದ ಕ್ಷೇತ್ರಗಳ ಕುರಿತಾಗಿ ಬಜೆಟ್ನಲ್ಲಿ ಮನ್ನಣೆ ನೀಡಲಾಗಿದೆ. ಹೀಗೆ ಆರೋಗ್ಯ ಕ್ಷೇತ್ರಕ್ಕೂ ಕೂಡಾ ಮನ್ನಣೆ ನೀಡಲಾಗಿದೆ.
ಮೂರು ಕ್ಯಾನ್ಸರ್ ಔಷಧಗಳ ಮೇಲಿನ ಕಸ್ಟಮ್ ಡ್ಯೂಟಿ ತೆರವುಗೊಳಿಸಲಾಗಿದೆ. ಅಂದರೆ ಈ ಮೂರು ಔಷಧಿಗಳು ಅಗ್ಗವಾಗಲಿವೆ. ಎಕ್ಸ್-ರೇ ಟ್ಯೂಬ್‌ಗಳು ಮತ್ತು ಫ್ಲಾಟ್ ಪ್ಯಾನಲ್ ಡಿಟೆಕ್ಟರ್‌ಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಶೇ 6 ರಷ್ಟು ಮತ್ತು ಪ್ಲಾಟಿನಂ ಮೇಲೆ ಶೇಕಡಾ 6.4 ರಷ್ಟು ಕಡಿಮೆ ಮಾಡಲಾಗುವುದು ಎಂದು ಹಣಕಾಸು ಸಚಿವರು ಬಜೆಟ್ನಲ್ಲಿ ಘೋಷಿಸಿದ್ದಾರೆ.
ಮೊಬೈಲ್ , ಚಾರ್ಜರ್‌ಗಳ ಮೇಲಿನ ತೆರಿಗೆ ಇಳಿಕೆ : ಮೊಬೈಲ್ ಹಾಗೂ ಚಾರ್ಜರ್‌ಗಳ ಮೇಲಿನ ತೆರಿಗೆ ಇಳಿಕೆ ಬಗ್ಗೆ ನಿರ್ಮಲಾ ಸೀತಾರಾಮನ್ ಮಹತ್ವದ ಘೋಷಣೆ ಮಾಡಿದ್ದಾರೆ.
ಮೊಬೈಲ್ ಫೋನ್, ಮೊಬೈಲ್ ಚಾರ್ಜರ್‌ಗಳ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನು ಸರ್ಕಾರವು 15% ಕ್ಕೆ ಇಳಿಸಿದೆ. ಜಿಎಸ್‌ಟಿ ತೆರಿಗೆ ರಚನೆಯನ್ನು ಇನ್ನಷ್ಟು ಸರಳಗೊಳಿಸಲು ಮತ್ತು ತರ್ಕಬದ್ಧಗೊಳಿಸಲು ಸರ್ಕಾರ ಪ್ರಯತ್ನಿಸಲಿದೆ ಎಂದು ಹಣಕಾಸು ಸಚಿವರು ಹೇಳಿದರು. 25 ನಿರ್ಣಾಯಕ ಖನಿಜಗಳ ಮೇಲೆ ಸರ್ಕಾರವು ಕಸ್ಟಮ್ಸ್ ಸುಂಕವನ್ನು ವಿನಾಯಿತಿ ನೀಡುತ್ತದೆ ಎಂದು ಹೇಳಿದರು.