ನ್ಯೂಸ್

VIDEO| ರಾಜ್ಯ ವ್ಯಾಪಿ ಅಕ್ರಮ ಸಕ್ರಮ ನೀತಿ ಜಾರಿಗೆ ಸರ್ಕಾರ ಚಿಂತನೆ

ದಾವಣಗೆರೆ: ಬೆಂಗಳೂರು ಮಾದರಿಯಲ್ಲಿ ರಾಜ್ಯವ್ಯಾಪಿ ಅಕ್ರಮ-ಸಕ್ರಮ ನೀತಿಯನ್ನು ಜಾರಿಗೆ ತರಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಹೇಳಿದರು.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯಲ್ಲಿ ಅಕ್ರಮ ಸಕ್ರಮಕ್ಕೆ ಅನುಮತಿ ನೀಡಲಾಗಿದೆ. ಇದೇ ರೀತಿ ರಾಜ್ಯದ ಎಲ್ಲ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಅಕ್ರಮ ಸಕ್ರಮ ನೀತಿಯನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ. ಶೀಘ್ರದಲ್ಲೇ ಸಂಪುಟ ಸಭೆಯಲ್ಲಿ ಅಂತಿಮ ನಿರ್ಧಾರ ಪ್ರಕಟವಾಗಲಿದೆ ಎಂದು ಅವರು ಹೇಳಿದರು.

ಅಕ್ರಮ ಸಕ್ರಮ ನೀತಿಯಿಂದ ಸರ್ಕಾರದ ಬೊಕ್ಕಸಕ್ಕೂ ಹಣ ಬರುತ್ತದೆ. ಅಲ್ಲದೆ ಸಾಮಾನ್ಯ ಜನರಿಗೂ ಅನುಕೂಲವಾಗುತ್ತದೆ. ಹೀಗಾಗಿ ಈ ನೀತಿಯನ್ನು ಜಾರಿಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಅವರು ಹೇಳಿದರು. (ದಿಗ್ವಿಜಯ ನ್ಯೂಸ್​)