ನವದೆಹಲಿ: ನಿನ್ನೆಯಷ್ಟೇ ಕೇಂದ್ರ ಸರ್ಕಾರ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರವನ್ನು ಕಡಿತಗೊಳಿಸಿ ಆದೇಶ ಹೊರಡಿಸಿತ್ತು. ಇಂದು ಈ ಆದೇಶವನ್ನು ಹಿಂತೆಗೆದುಕೊಂಡಿದ್ದುಮ, ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರ ಮುಂಚಿನಂತೆ ಮುಂದುವರೆಯುತ್ತದೆ ಎಂದು ತಿಳಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, 2020-21 ರಂತೆ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರ ಮುಂದುವರೆಯುತ್ತದೆ. ಹಿಂದಿನ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಟ್ವಿಟ್ ಮಾಡಿದ್ದಾರೆ.
ಸಣ್ಣ ಉಳಿತಾಯ ಯೋಜನೆಗಳಾದ ಪಿಪಿಎಫ್, ಸುಕನ್ಯಾ ಸಮೃದ್ಧಿ ಯೋಜನೆ, ಎನ್ಎಸ್ಸಿ ಸೇರಿದಂತೆ ಎಲ್ಲ ಸಣ್ಣ ಉಳಿತಾಯ ಖಾತೆ ಮೇಲಿನ ಬಡ್ಡಿ ದರವನ್ನು ಶೇ 1.1 ರವರೆಗೆ ಇಳಿಕೆ ಮಾಡಲಾಗಿತ್ತು. ಇದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು.
ಪ್ರತಿ ಮೂರು ತಿಂಗಳಿಗೊಮ್ಮೆ ಸಣ್ಣ ಉಳಿತಾಯ ಯೋಜನೆಗಳ ಮೇಲೆ ಬಡ್ಡಿ ಪರಿಷ್ಕರಣೆ ಆಗುತ್ತದೆ.