ನ್ಯೂಸ್

VIDEO| ಅಪ್ರಾಪ್ತ ವಯಸ್ಕಳಿಗೆ ಲೈಂಗಿಕ ಕಿರುಕುಳ ನೀಡಿ ಮೇಕೆಯ ಮೇಲೆ ಅತ್ಯಾಚಾರ ಎಸಗಿದ ಸರ್ಕಾರಿ ನೌಕರ

ಲಖನೌ: ಆಘಾತಕಾರಿ ಘಟನೆಯೊಂದರಲ್ಲಿ ಸರ್ಕಾರಿ ನೌಕರನೋರ್ವ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಮೇಕೆಯ ಮೇಲೆ ಅತ್ಯಾಚಾರ ಎಸಗಿ ವಿಕೃತಿ ಮೆರೆದಿರುವ ಘಟನೆ ಉತ್ತರಪ್ರದೇಶದ ಬುಲಂದರ್​ಶಹರ್​ನಲ್ಲಿ ನಡೆದಿದ್ದು, ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಘಟನೆ ಸಂಬಂಧ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.

ಆರೋಪಿಯನ್ನು ಗಜೇಂದ್ರ ಸಿಂಗ್​ (50) ಎಂದು ಗುರುತಿಸಲಾಗಿದ್ದು, ಈತ ADO ಆಗಿ ಕಾರ್ಯನಿರ್ವಹಿಸುತ್ತಿದ್ದಾನೆ. ತನ್ನ ಪರಿಚಯಸ್ಥರ ಮನೆಗೆ ಹೋಗಿದ್ದ ವೇಳೆ ಈ ಕೃತ್ಯ ಎಸಗಿದ್ದು, ಆರೋಪಿಯ ಈ ಪೈಶಾಚಿಕ ಕೃತ್ಯವನ್ನು ಸ್ಥಳೀಯರೊಬ್ಬರು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್​ ಮಾಡಿದ್ದಾರೆ.

ವೈರಲ್​ ಆಗಿರುವ ವಿಡಿಯೋ ನೋಡುವುದಾದರೆ ದನದ ಕೊಟ್ಟಿಗೆಯೊಂದರಲ್ಲಿ ಹಾಕಲಾಗಿರುವ ಹಗ್ಗದ ಮಂಚದ ಮೇಲೆ ಮಲಗಿರುವ ಆರೋಪಿ ಗಜೇಂದ್ರ ಮೊದಲಿಗೆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಾನೆ. ಇಷ್ಟಕ್ಕೆ ಸುಮ್ಮನಾಗದ ಆರೋಪಿ ಬಳಿಕ ಅಲ್ಲೇ ಕಟ್ಟಿಹಾಕಿದ್ದ ಮೇಕೆಯ ಮೇಲೆ ಅತ್ಯಾಚಾರ ಎಸಗುವುದನ್ನು ವೈರಲ್​ ಆಗಿರುವ ವಿಡಿಯೋದಲ್ಲಿ ನೋಡಬಹುದಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಅಹ್ಮದ್​ಗಢ ವಿಭಾಗದ ಪೊಲೀಸ್​ ಅಧಿಕಾರಿಯೊಬ್ಬರು, ಸಹರಾನ್‌ಪುರ ನಿವಾಸಿಯಾಗಿರುವ ಆರೋಪಿಯು ಶಿಕರ್​ಪುರ ಬ್ಲಾಕ್​ ADO ಆಗಿ ಕಾರ್ಯನಿರ್ವಹಿಸುತ್ತಿದ್ದಾನೆ, ಆರೋಪಿಯನ್ನು ಲೈಂಗಿಕ ಕಿರುಕುಳ, ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ ಆರೋಪದ ಮೇಲೆ ಬಂಧಿಸಲಾಗಿದ್ದು, ಈ ಕೃತ್ಯವನ್ನು ಮನೆಯ ಪಕ್ಕದಲ್ಲೇ ಇರುವ ವ್ಯಕ್ತಿ ವಿಡಿಯೋ ಮಾಡಿಕೊಂಡಿದ್ದಾರೆ. ಆರೋಪಿಯನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಶೀಘ್ರದಲ್ಲೇ ಚಾರ್ಜ್​ಶೀಟ್​ ಸಲ್ಲಿಸಲಾಗುವುದು ಎಂದು ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.