ನ್ಯೂಸ್

ಪಶ್ಚಿಮ ಬಂಗಾಳ ಮೂಲದ ಬಿಎಸ್ಸಿ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ನೇಣಿಗೆ ಶರಣು!

ಬೆಂಗಳೂರು: ಬಿಎಸ್ಸಿ ವ್ಯಾಸಾಂಗ‌ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪಶ್ಚಿಮ ಬಂಗಾಳದ ಮೂಲದ ವಿದ್ಯಾರ್ಥಿ ರಮಿತಾ ರಾಯ್, ಆಚಾರ್ಯ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿದ್ದಳು. ಸೋಲದೇವನಹಳ್ಳಿಯಲ್ಲಿ ವಾಸವಾಗಿದ್ದ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ವಿದ್ಯಾರ್ಥಿನಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ರಮಿತಾ ರಾಯ್ ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬುದು ಪೊಲೀಸ್ ತನಿಖೆಯಿಂದ ಹೊರ ಬರಬೇಕಿದೆ. ಸದ್ಯ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.