ನ್ಯೂಸ್

ವಿಧಾನ ಪರಿಷತ್ತಿನಲ್ಲೂ ಗ್ರೇಟರ್ ಬೆಂಗಳೂರು ತಿದ್ದುಪಡಿ ವಿಧೇಯಕ ಅಂಗೀಕಾರ | Amendment Bill

ಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ(Amendment Bill) 2025 ಕ್ಕೆ ವಿಧಾನ ಪರಿಷತ್ತಿನಲ್ಲಿ ಗುರುವಾರ ಅಂಗೀಕಾರ ದೊರೆಯಿತು.

ವಿಧಾನಸಭೆಯಲ್ಲಿ ಅಂಗೀಕೃತ ಸ್ವರೂಪದಲ್ಲಿರುವ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025’ ಅನ್ನು ಬೆಂಗಳೂರು ನಗರಾಭಿವೃದ್ದಿ ಸಚಿವರೂ ಆದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮೇಲ್ಮನೆಯಲ್ಲಿ ಮಂಡಿಸಿದರು. ಅಲ್ಪಚರ್ಚೆ ಬಳಿಕ ಅನುಮೋದನೆ ನೀಡಲಾಯಿತು.

ತಿದ್ದುಪಡಿ ವಿಧೇಯಕದ ಪ್ರಸ್ತಾವನೆ ವೇಳೆ ಮಾತನಾಡಿದ ಶಿವಕುಮಾರ್, “ಈ ವಿಧೇಯಕದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಸಂವಿಧಾನದ 74ನೇ ತಿದ್ದುಪಡಿ ಅಡಿಯಲ್ಲಿ ಬರುವ ಪಾಲಿಕೆಗಳ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂಬ ಅಂಶವನ್ನು ಸ್ಪಷ್ಟಪಡಿಸಲಾಗಿದೆ. ಭವಿಷ್ಯದಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ನೀಡಬಾರದು ಎಂಬ ಉದ್ದೇಶದಿಂದ ಈ ತಿದ್ದುಪಡಿಯಲ್ಲಿ ಜಿಬಿಎ ಪಾಲಿಕೆಗಳ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂಬ ಸ್ಪಷ್ಟನೆ ನೀಡಲಾಗಿದೆ” ಎಂದು ತಿಳಿಸಿದರು.