ಬೆಂಗಳೂರು: ಆಡಳಿತ ವೀಕೆಂದ್ರಿಕರಣ ದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಂಖ್ಯೆಯನ್ನು ಹೆಚ್ಚು ಮಾಡುವ ಉದ್ದೇಶದ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ವನ್ನು ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ಸಭಾತ್ಯಾಗದ ನಡುವೆ ಸೋಮವಾರ ಅಂಗೀಕರಿಸಲಾಯಿತು.
ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ DK ಶಿವಕುಮಾರ್, 20 ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024 ಅನ್ನು ಸದನದಲ್ಲಿ ಮಂಡಿಸಿ, ಅದರ ಉದ್ದೇಶವನ್ನು ವಿವರಿಸಿದರು. ನಂತರ ಪ್ರತಿಪಕ್ಷಗಳ ಸದಸ್ಯರು ತಮ್ಮ ಅಭಿಪ್ರಾಯ, ಆಕ್ಷೇಪ ಕಾರಣಗಳನ್ನು ತಿಳಿಸಿದರು.
ಇದಕ್ಕೆ ಪ್ರತಿಕ್ರಿಯೆ ಕೊಟ್ಟ DCM, ವಿರೋಧ ಪಕ್ಷಗಳ ನಾಯಕರು ತಮ್ಮದೇ ಆದ ಅಭಿಪ್ರಾಯ ತಿಳಿಸಿದ್ದಾರೆ. ಅವರು ಅಭಿಪ್ರಾಯವನ್ನು ನಾನು ವಿರೋಧಿಸುವುದಿಲ್ಲ. ಅವರಲ್ಲಿ ಕೆಲವರಿಗೆ ರಾಜಕೀಯ ಇಚ್ಚಾಶಕ್ತಿಯೂ ಇದೆ. ಅದರಲ್ಲಿ ತಪ್ಪಿಲ್ಲ. ಈಗಿರುವ ವ್ಯವಸ್ಥೆಯಲ್ಲಿಯೇ ಬೆಂಗಳೂರು ನಗರವನ್ನು ಮುನ್ನಡೆಸುವುದು ಅಸಾಧ್ಯ ಎಂದು ಅವರು ಆತ್ಮಸಾಕ್ಷಿ ಮೂಲಕ ಒಪ್ಪಿದ್ದಾರೆ.
ಇದನ್ನೂ ಓದಿ:ನುಗ್ಗೆ ಸೊಪ್ಪಿನ ನೀರು ಕುಡಿಯಿರಿ; ಶುಗರ್ ಕಂಟ್ರೋಲ್ ಸೇರಿ ಈ 4 ಆರೋಗ್ಯ ಪ್ರಯೋಜನೆ ಪಡೆದುಕೊಳ್ಳಿ! | Moringa Water
ತ್ಯಾಜ್ಯ ನಿರ್ವಹಣೆ, ಕುಡಿಯುವ ನೀರು ಆಡಳಿತಕ್ಕೆ ದೊಡ್ಡ ಸಮಸ್ಯೆ ಎಂಬ ಅರಿವು ಅವರಿಗಿದೆ. ಬೆಂಗಳೂರು ನಗರ ಕೆಂಪೇಗೌಡರು ಕಟ್ಟಿಸಿದ ಗೋಪುರ ಮೀರಿ ಬೆಳೆದಿದೆ. ಈಗಲೂ ಅದನ್ನು ನಿಲ್ಲಿಸಲು ಆಗುವುದಿಲ್ಲ, ಮುಂದೆಯೂ ಆಗುವುದಿಲ್ಲ. ಯಲಹಂಕ, ಕೆಂಗೇರಿ ಉಪನಗರಗಳು ಈಗ ಪಾಲಿಕೆ ವ್ಯಾಪ್ತಿಗೆ ಸೇರಿವೆ. ಹೀಗೆ ಬೆಳೆದಿರುವ ಬೆಂಗಳೂರಿನ ಆಡಳಿತವನ್ನು ನಾವು ವಿಕೇಂದ್ರೀಕರಣ ಮಾಡಲು ಮುಂದಾಗಿದ್ದೇವೆ ಎಂದು ತಿಳಿಸಿದರು.
ದೆಹಲಿ ಪರಿಸ್ಥಿತಿಯೇ ಬೇರೆ. ಇನ್ನು ಮುಂಬೈಯಲ್ಲಿ ಮೊದಲೇ ಅವರು ಅಧಿಕಾರ ನೀಡಿದ್ದರು. ಈಗ ಇಲ್ಲಿ ನಾವು ಹಣಕಾಸಿನ ವಿಚಾರ ಚರ್ಚೆ ಮಾಡುತ್ತಿದ್ದೇವೆ. ನಾವು ಬೆಂಗಳೂರನ್ನು ಛಿದ್ರ ಮಾಡಲು ಹೋಗುತ್ತಿಲ್ಲ, ಬೆಂಗಳೂರನ್ನು ಗಟ್ಟಿ ಮಾಡುತ್ತಿದ್ದೇವೆ. ಬೆಂಗಳೂರಿನ ಗೌರವ ಉಳಿಸಬೇಕು ಎಂದರು.