ನಾಪೋಕ್ಲು: ಮೂರ್ನಾಡು-ಬಲಮುರಿ -ಪಾರಾಣೆ-ನಾಪೋಕ್ಲು ಸಂಪರ್ಕಿಸುವ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಪಾರಾಣೆಯಲ್ಲಿ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್ ಪೊನ್ನಣ್ಣ ಭಾನುವಾರ ಭೂಮಿ ಪೂಜೆ ನೆರವೇರಿಸಿದರು.
ಸುಮಾರು 2.75 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕೈಗೊಂಡಿರುವ ಕಾಮಗಾರಿಗೆ, ಪಾರಣೆ ಗ್ರಾಮ ಪಂಚಾಯಿತಿಯ ಕೈಕಾಡು ಗ್ರಾಮದ ನಾಯಕಂಡ ಮನೆಯ ಬಳಿ ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿ, ಶಾಸಕರು, ಲೋಕೋಪಯೋಗಿ ಇಲಾಖೆಯ ಅಧೀನದಲ್ಲಿ ಈ ಕಾಮಗಾರಿಯನ್ನು ಕೈಗೊಳ್ಳಲಾಗಿದ್ದು, ಇಂಜಿನಿಯರ್ ಹಾಗೂ ಗುತ್ತಿಗೆದಾರರು ಕಾಮಗಾರಿ ಮಾಡುವ ಸಂದರ್ಭದಲ್ಲಿ ಗುಣಮಟ್ಟ ಕಾಯ್ದುಕೊಳ್ಳುವುದು ಅತಿ ಮುಖ್ಯ. ಸಾರ್ವಜನಿಕರ ಅನುಕೂಲಕ್ಕಾಗಿ ತಾನು ಈ ರಸ್ತೆಯ ಅಭಿವೃದ್ಧಿಗೆ ಮುಖ್ಯಮಂತ್ರಿಗಳಲ್ಲಿ ವಿಶೇಷ ಅನುದಾನವನ್ನು ತಂದಿದ್ದು, ಇದರ ಸಂಪೂರ್ಣ ಸದುಪಯೋಗ ಈ ಭಾಗದ ಸಾರ್ವಜನಿಕರಿಗೆ ಹಾಗೂ ಈ ರಸ್ತೆಯನ್ನು ಬಳಿಸುವ ಎಲ್ಲ ಬಳಕೆದಾರರಿಗೆ ಲಭಿಸುವಂತಹಾಗಬೇಕು ಹಾಗೂ ಗುಣಮಟ್ಟ ಕಾಯ್ದುಕೊಳ್ಳುವಲ್ಲಿ ವಿಶೇಷ ಗಮನಹರಿಸಬೇಕೆಂದು ತಾಕೀತು ಮಾಡಿದರು.
ಶಾಸಕರು ಭೂಮಿಪೂಜೆಗೆ ತೆರಳುವ ಸಂದರ್ಭದಲ್ಲಿ, ಸ್ವಾಮಿ ಕೊರಗಜ್ಜನ ಕೋಲದಲ್ಲಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಡಿಸಿಸಿ ಉಪಾಧ್ಯಕ್ಷ ಎಂ ಎಚ್ ಅಬ್ದುಲ್ ರೆಹಮಾನ್, ನಾಪೋಕ್ಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಇಸ್ಮಾಯಿಲ್, ಪಾರಾಣೆ ಪಂಚಾಯಿತಿ ಅಧ್ಯಕ್ಷ ಪಾಡೆಯಂಡ ಕಟ್ಟಿ ಕುಶಾಲಪ್ಪ, ನಿವೃತ್ತ ಸೇನಾನಿ ನಾಯಕಂಡ ಬೋಪಣ್ಣ, ಪಾಡೆಯಂಡ ಜಿ.ಮುತ್ತಪ್ಪ ,ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಬೊಲ್ಲಚೆಟ್ಟಿರ ಸುರೇಶ್, ನಾಯಕಂಡ ಮುತ್ತಪ್ಪ ಕಾಂಗ್ರೆಸ್ ಮುಖಂಡರು, ಪಕ್ಷದ ಪ್ರಮುಖರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.