ಕೋಲಾರ: ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಬಡವರಿಗೆ ಶಕ್ತಿ ತುಂಬುತ್ತಿವೆ. ಇದರಡಿ ಯಾರೂ ವಂಚನೆಗೆ ಒಳಗಾಗದಂತೆ ಅಧಿಕಾರಿಗಳು ಎಚ್ಚರವಹಿಸಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ.ಶಿವಕುಮಾರ್ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಗಂಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಯೋಜನೆಯ ಪ್ರಯೋಜನ ಪಡೆದುಕೊಳ್ಳಲು ಅರ್ಹರಿದ್ದು, ನೋಂದಣಿಯಾಗದೆ ಇರುವವರನ್ನು ಗುರುತಿಸಿ ಸೌಲಭ್ಯ ಕಲ್ಪಿಸಬೇಕು ಎಂದರು.
ಈಗಾಗಲೇ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ಇದೆ. ಅಧಿಕಾರಿಗಳು ಇನ್ನು ಪರಿಣಾಮಕಾರಿಯಾಗಿ ಯೋಜನೆಗಳ ಬಗ್ಗೆ ಪ್ರಚಾರ ಮಾಡಬೇಕು. ವಿವಿಧ ಯೋಜನೆಗಳಡಿ ಡಿಬಿಟಿ ಆಗುವುದು ತಾಂತ್ರಿಕ ದೋಷ ಇದ್ದರೆ ಸರಿಪಡಿಸಿಕೊಡಬೇಕು ಎಂದು ಸೂಚಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ನಾರಾಯಣಸ್ವಾಮಿ ಮಾತನಾಡಿ, ಗೃಹ ಲಕ್ಷಿ$್ಮ ಯೋಜನೆಯಡಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2,000 ಸಾವಿರ ರೂ. ಡಿಬಿಟಿ ಮೂಲಕ ಅವರ ಖಾತೆಗೆ ಜಮೆ ಮಾಡಲಾಗುತ್ತಿದೆ. ಇದುವರೆಗೂ ಜಿಲ್ಲೆಯಲ್ಲಿ ಒಟ್ಟು60,26,112 ಫಲಾನುಭವಿಗಳಿಗೆ ಯೋಜನೆಯ ಪ್ರಾರಂಭದಿಂದ ಮೇ ತಿಂಗಳವರೆಗೆ 12,05,22 ಕೋಟಿ ರೂ. ಜಮೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಆಹಾರ ಇಲಾಖೆಯ ನಿರ್ದೇಶಕ ಪ್ರಕಾಶ್ ಮಾತಣಾಡಿ, ಅನ್ನಭಾಗ್ಯ ಯೋಜನೆಯಡಿ ಪ್ರತಿಯೊಬ್ಬರಿಗೆ 10 ಅಕ್ಕಿ ನೀಡಲಾಗುತ್ತಿದೆ. ಇದಕ್ಕಾಗಿ ಪ್ರತಿತಿಂಗಳು 15 -ರಿಂದ 16 ಕೋಟಿ ರೂ. ವೆಚ್ಚವಾಗುತ್ತಿದೆ. ಇಲಾಖೆಯಿಂದ ಅದಾಲತ್ ನಡೆಸಿ ಸಾರ್ವಜನಿಕರ ಸಮಸ್ಯೆ ಬಗೆಹರಿಸಲಾಗುತ್ತಿದೆ ಎಂದರು.
ಗೃಹಜ್ಯೋತಿ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 9,63,610 ಫಲಾನುಭವಿಗಳಿಗೆ 200 ಯುನಿಟ್ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಯೋಜನೆ ಪ್ರಾರಂಭದಿಂದ ಇದುವರೆಗೆ 33,507,77ಕೋಟಿ ರೂ. ಅನುದಾನ ವೆಚ್ಚವಾಗಿದೆ ಎಂದು ಮಾಹಿತಿ ನೀಡಿದರು.
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವಿಣ್ ಪಿ.ಬಾಗೇವಾಡಿ ಮಾತನಾಡಿ, ಶಕ್ತಿ ಯೋಜನೆಗೆ ಹಾಗೂ ಅನ್ನಭಾಗ್ಯ ಯೋಜನೆ ಕುರಿತು ಸದಸ್ಯರು ಗಮನಿಸಿದ ವಿಷಯಗಳಿಗೆ ಸಂಬಂಧಸಿದಂತೆ ಕೂಡಲೇ ಅಗತ್ಯ ಕ್ರಮವಹಿಸಿ ವರದಿ ಸಲ್ಲಿಸಲು ಸಂಬಂಧಸಿದ ಅಧಿಕಾರಿಗಳಿಗೆ ಸೂಚಿಸಿದರು.
ಅಂಜನಪ್ಪ, ಮನೋಹರ, ಮಂಗಳಮ್ಮ, ಇನಾಯತ್, ರಾಧಾಕೃಷ್ಣರೆಡ್ಡಿ, ಪಾರ್ಥಸಾರಥಿ, ಮಮತಾರೆಡ್ಡಿ ಇದ್ದರು.