ಹರಪನಹಳ್ಳಿ: ಅತಿಥಿ ಶಿಕ್ಷಕರಿಗೆ ಸೇವಾ ಭದ್ರತೆ ಒದಗಿಸಲು ಒತ್ತಾಯಿಸಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘ ಪಟ್ಟಣದಲ್ಲಿ ಶಾಸಕಿ ಎಂ.ಪಿ.ಲತಾಗೆ ಬುಧವಾರ ಮನವಿ ಸಲ್ಲಿಸಿತು.
ರಾಜ್ಯದಲ್ಲಿ ಸುಮಾರು 33 ಸಾವಿರಕ್ಕೂ ಹೆಚ್ಚು ಅತಿಥಿ ಶಿಕ್ಷಕರು ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ ವಿವಿಧ ಬೇಡಿಕೆ ಹಾಗೂ ಸಮಸ್ಯೆಗಳನ್ನು ಈಡೇರೆಸಲು ಸರ್ಕಾರಗಳು ಮನಸ್ಸು ಮಾಡುತ್ತಿಲ್ಲ. ಹೀಗಾಗಿ ಶಿಕ್ಷಕರ ಬದುಕಿಗೆ ಅಭದ್ರತೆ ಕಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅತಿಥಿ ಶಿಕ್ಷಕರಿಗೆ ಸೇವಾ ಹಿರಿತನ ಆಧಾರದ ಮೇಲೆ ಪರಿಗಣಿಸಬೇಕು. ಮೆರಿಟ್ ಪದ್ಧತಿಯನ್ನು ತೆಗೆದು ಹಾಕಬೇಕು. ಎಲ್ಲ ಅತಿಥಿ ಶಿಕ್ಷಕರಿಗೆ ಸೇವಾ ಭದ್ರತೆ ನೀಡಬೇಕು. ಸರ್ಕಾರಿ ಶಿಕ್ಷಕರಂತೆ ಅತಿಥಿ ಶಿಕ್ಷಕಕರಿಗೆ ಸಹ ಮಧ್ಯಂತರ ರಜೆ ಮತ್ತು ಬೇಸಿಗೆ ರಜೆಯಲ್ಲಿ ವೇತನ ನೀಡಬೇಕು. ಶೈಕ್ಷಣಿಕ ವರ್ಷದಲ್ಲಿ ವೇತನ ಹೆಚ್ಚಿಸಿ ಸುಪ್ರೀಂ ಕೋರ್ಟ್ ಆದೇಶದಂತೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಅತಿಥಿ ಶಿಕ್ಷಕ ಎಂಬ ಪದವನ್ನು ತೆಗೆದು ಹಾಕಿ ಗೌರವ ಶಿಕ್ಷಕ ಎಂದು ನಮೂದಿಸಬೇಕು. ನೇಮಕಾತಿಯಲ್ಲಿ 5% ಕೃಪಾಂಕ ನೀಡಬೇಕೆಂದು ಒತ್ತಾಯಿಸಿದರು.
ಇದನ್ನೂ ಓದಿ: ಚಂದ್ರಯಾನವೂ, ಇಸ್ರೋ ಅಧ್ಯಕ್ಷರೂ..; ಹೀಗೊಂದು ಕಾಕತಾಳೀಯ!
ಪ್ರಮುಖರಾದ ನಾಗರಾಜ ಆಚಾರಿ, ಗೋಪಿನಾಯ್ಕ, ಸತೀಶ್, ಅಹ್ಮದ್, ನಾಗಲಿಂಗಪ್ಪ, ಅಂಜಿನಪ್ಪ, ವಿನಯಕುಮಾರ ಇನ್ನಿತರರಿದ್ದರು.