ಗಾಂಧಿನಗರ: ಗುಜರಾತ್ನ ಬಿಜೆಪಿ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ಮನ್ಸುಖ್ ವಾಸವಾ ಮಂಗಳವಾರದಂದು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕೇಂದ್ರದ ಬಜೆಟ್ ಸಮಯದಲ್ಲಿ ಸಂಸದ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಪಂಜಾಬ್ನಲ್ಲಿ 1,561 ಮೊಬೈಲ್ ಟವರ್ಗಳನ್ನು ಹಾಳುಗೆಡವಿದ ರೈತ ಹೋರಾಟಗಾರರು; ಕಠಿಣ ಕ್ರಮಕ್ಕೆ ಮುಂದಾದ ಸಿಎಂ
ನಾನು ಇಷ್ಟು ದಿನ ಪಕ್ಷಕ್ಕೆ ನಿಷ್ಠೆಯಿಂದ ದುಡಿದಿದ್ದೇನೆ. ನಾನು ನಿಭಾಯಿಸಬಲ್ಲದಕ್ಕಿಂತ ಹೆಚ್ಚಿನದನ್ನು ಬಿಜೆಪಿ ನನಗೆ ನೀಡಿದೆ. ಇದಕ್ಕಾಗಿ ನಾನು ಪಕ್ಷ ಮತ್ತು ಪಕ್ಷದ ಕೇಂದ್ರ ಮುಖಂಡರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ನನ್ನ ತಪ್ಪುಗಳಿಂದಾಗಿ ಪಕ್ಷಕ್ಕೆ ಕೆಟ್ಟ ಹೆಸರು ಬರಬಾರದು ಎಂದು ಈಗ ರಾಜೀನಾಮೆ ನೀಡುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ. ನರ್ಮದಾ ಜಿಲ್ಲೆಯ 121 ಗ್ರಾಮಗಳನ್ನು ಪರಿಸರ ಸೂಕ್ಷ್ಮ ವಲಯವೆಂದು ಘೋಷಿಸುವ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಅಧಿಸೂಚನೆಯನ್ನು ಹಿಂಪಡೆಯಬೇಕೆಂದು ಕೋರಿ ವಾಸವಾ ಅವರು ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು.
ಮನ್ಸುಖ್ ಅವರು ಗುಜರಾತ್ನ ಭರೂಚ್ ಕ್ಷೇತ್ರದಿಂದ ಆರು ಬಾರಿ ಕೇಂದ್ರಕ್ಕೆ ಆಯ್ಕೆಯಾಗಿದ್ದರು. ಅವರು 2014ರಿಂದ 2016ರವರೆಗೆ ಕೇಂದ್ರದ ಬುಡಕಟ್ಟು ವ್ಯವಹಾರಗಳ ರಾಜ್ಯ ಸಚಿವರಾಗಿ ಕರ್ತವ್ಯ ನಿರ್ವಹಿಸಿದ್ದರು. (ಏಜೆನ್ಸೀಸ್)