ಗುಜರಾತ್ : (Bus accident ) ಖಾಸಗಿ ಬಸ್ ಡಂಪರ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 10 ಮಂದಿ ಗಾಯಗೊಂಡಿದ್ದಾರೆ. ಈ ಭೀಕರ ಅಪಘಾತ ಗುಜರಾತ್‌ನ ಭಾವನಗರ ಜಿಲ್ಲೆಯ ಹೆದ್ದಾರಿಯಲ್ಲಿ ನಡೆದಿದೆ.
ಭಾವನಗರದಿಂದ ಮಹುವಾ ಕಡೆಗೆ ಬಸ್ ತೆರಳುತ್ತಿದ್ದಾಗ ಬೆಳಗ್ಗೆ 6 ಗಂಟೆ ಸುಮಾರಿಗೆ ತ್ರಪಾಜ್ ಗ್ರಾಮದ ಬಳಿ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹರ್ಷದ್ ಪಟೇಲ್ ತಿಳಿಸಿದ್ದಾರೆ.
ಇದನ್ನೂ ಓದಿ: Celebrities Marriages : 2024ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸೆಲೆಬ್ರಿಟಿ ಜೋಡಿಗಳು ಯಾರ್ಯಾರು ಗೊತ್ತಾ?
ಬಸ್ ಹಿಂದಿನಿಂದ ಡಂಪ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ, ಎಂಟರಿಂದ ಹತ್ತು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ: Naga Chaitanya - Sobhita Dhulipala ಲವ್ ಸ್ಟೋರಿಗೆ ಕಾರಣ Instagram! ಇವರಿಬ್ಬರ ಪ್ರೀತಿ ಶುರುವಾಗಿದ್ದು ಹೇಗೆ?
ಗಾಯಾಳುಗಳು ಅಪಾಯದಿಂದ ಪಾರಾಗಿದ್ದಾರೆ . ಡಿಕ್ಕಿಯ ರಭಸಕ್ಕೆ ಬಸ್ಸಿನ ಬಲಭಾಗದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.