ನ್ಯೂಸ್

ಮಾನನಷ್ಟ ಮೊಕದ್ದಮೆ ಪ್ರಕರಣ; ರಾಹುಲ್​ ಗಾಂಧಿಗೆ ಶಾಕ್​ ನೀಡಿದ ಹೈಕೋರ್ಟ್​

ಅಹಮದಬಾದ್: 2019ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಮೋದಿ ಉಪನಾಮ ಕುರಿತು ವ್ಯಂಗ್ಯವಾಡಿ ಮಾನನಷ್ಟ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಂಸತ್​ ಸ್ಥಾನದಿಂದ ಅನರ್ಹಗೊಂಡಿರುವ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿಗೆ ನ್ಯಾಯಾಲಯ ಶಾಕ್​ ನೀಡಿದೆ.

2 ವರ್ಷಗಳ ಜೈಲು ಶಿಕ್ಷೆಗೆ ತಡೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಗುಜರಾತ್​ ಹೈಕೋರ್ಟ್​ ರಾಹುಲ್​ ಗಾಂಧಿಗೆ ಶಾಕ್​ ನೀಡಿದ್ದು ಕಾಂಗ್ರೆಸ್​ ನಾಯಕನಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ತೀರ್ಪು ಕಾಯ್ದಿರಿಸಿದ ನ್ಯಾಯಾಲಯ

ಅರ್ಜಿ ವಿಚಾರಣೆ ನಡೆಸಿದ ಹೇಮಂತ್ ಪ್ರಚಕ್ ಅವರಿದ್ದ ಏಕಸದಸ್ಯ ಪೀಠವು ವಾದ-ಪ್ರತಿವಾದವನ್ನು ಸುಧೀರ್ಘವಾಗಿ ಆಲಿಸಿದ ನಂತರ ಶಿಕ್ಷಯಿಂದ ರಕ್ಷಣೆ ನೀಡಲು ನಿರಾಕರಿಸಿದೆ.

ಇನ್ನು ಪ್ರಕರಣದ ಸಂಬಂಧ ನ್ಯಾಯಾಲಯ ತನ್ನ ತೀರ್ಪನ್ನು ಕಾಯ್ದಿರಿಸಿದ್ದು ಬೇಸಿಗೆ ರಜೆಯ ನಂತರ ಜೂನ್​ 4ರಂದು ಪ್ರಕಟಿಸುವುದಾಗಿ ತಿಳಿಸಿದೆ.