ನ್ಯೂಸ್

ಗುಲಗಂಜಿಯಷ್ಟು ನ್ಯೂನ್ಯತೆ ಇಲ್ಲ; ಸಿದ್ದರಾಮಯ್ಯ

ಬೆಂಗಳೂರು: ದಮನಿತ ವರ್ಗಗಳ ಜನಸಮೂಹದಿಂದ ಬಂದವರು ರಾಜಕಾರಣವನ್ನೆ ಮಾಡಬಾರದೆಂಬ ನಿಲುವು ಬಿಜೆಪಿ, ಜೆಡಿಎಸ್‌ನವರದ್ದು. ಹಿಂದೆ ದೇವರಾಜ ಅರಸರ ವಿಚಾರದಲ್ಲೂ ಹೀಗೆ ಆಯಿತು. ಧರ್ಮಸಿಂಗ್ ವಿಚಾರದಲ್ಲೂ ಹೀಗೆ ಆಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾನಾಡಿದ ಅವರು, ಕಲ್ಯಾಣದ ಬಿಜ್ಜಳನನ್ನು ಇದೆ ಪೇಶ್ವೆ ಮನಸ್ಥಿತಿಯ ಜನರೆ ಕೊಲೆ ಮಾಡಿದರು. ಈಗ ನನ್ನ ವಿಚಾರಕ್ಕೂ ಬಂದಿದ್ದೀರಿ. ಅಡ್ಡಿಯಿಲ್ಲ ಬನ್ನಿ, ಬಂದದ್ದು ಒಳ್ಳೆಯದೆ ಆಯಿತು. ರಾಜ್ಯದ ಜನ ನೋಡುತ್ತಿದ್ದಾರೆ. ಆದ್ದರಿಂದಲೆ ಈ ರೀತಿ ಮುಡಾ ವಿಚಾರದಲ್ಲಿ ಒಂದು ಗುಲಗಂಜಿಯಷ್ಟು ನ್ಯೂನ್ಯತೆಯಿಲ್ಲದಿದ್ದರೂ ದೊಡ್ಡ ಸುದ್ದಿ ಮಾಡಿಕೊಂಡು ಕೂತಿದ್ದಾರೆ ಎಂದರು.

ನಿಮ್ಮ ಹಿಂದೆ ನಿಂತು ಆಟ ಆಡುತ್ತಿರುವ ಸೈದ್ಧಾಂತಿಕ ಗುರುಗಳಿಗೆ ಕರ್ನಾಟಕದ ಜನರ ಮನಸ್ಥಿತಿ ಅರ್ಥವಾಗುತ್ತಿದೆ ಎಂದು ಸಿದ್ದರಾಮಯ್ಯ ಬಿಜೆಪಿ ಹಾಗೂ ಜೆಡಿಎಸ್ ರಾಜ್ಯ ನಾಯಕರನ್ನು ಟೀಕಿಸಿದ್ದಾರೆ.

ಜನ ನಮ್ಮಿಂದ ದೂರ ಸರಿಯುತ್ತಿದ್ದಾರೆ ಎಂದು ಅವರಿಗೆ ಗೊತ್ತಿದೆ. ಆದ್ದರಿಂದಲೆ ಕಾಗಕ್ಕ-ಗೂಬಕ್ಕನ ಕಥೆ ಕಟ್ಟಿ ಜನರನ್ನು ನಂಬಿಸಲು ಹೊರಟಿದ್ದಾರೆ. ಬಿಜೆಪಿ- ಜೆಡಿಎಸ್‌ನವರ ಮೆದುಳು ಖಾಲಿಯಾಗಿದೆ. ಬೌದ್ಧಿಕವಾಗಿ ದಿವಾಳಿಯಾಗಿದ್ದಾರೆ. ಹಾಲಿನ ರೇಟು ಹೆಚ್ಚು ಮಾಡಲಿಲ್ಲ ಎಂದು ತಿಳಿಸಿ ಹೇಳಿದರೂ ಹಾಲಿನ ರೇಟು ಹೆಚ್ಚು ಮಾಡಿದರು ಎಂದು ಪ್ರಚಾರ ಮಾಡಿದರು ಎಂದರು.