ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರ ಹುಟ್ಟುಹಬ್ಬಕ್ಕೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್. ಡಿ.ದೇವೇಗೌಡರು ಟ್ವೀಟ್ ಮೂಲಕ ಶುಭಕೋರಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಆಯುರಾರೋಗ್ಯ, ಸುಖಶಾಂತಿ ನೀಡಿ ಕಾಪಾಡಲಿ ಎಂದು ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಹಾಗೇ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರೂ ಶುಭ ಹಾರೈಸಿದ್ದಾರೆ. ಆಪ್ತ ಸಹಾಯಕನ ಮೂಲಕ ಹೂಗುಚ್ಛ ಹಾಗೂ ಶುಭಾಶಯ ಪತ್ರವನ್ನು ಕಳಿಸಿದ್ದಾರೆ ಎನ್ನಲಾಗಿದೆ.
78ನೇ ಜನ್ಮದಿನದ ಸಂಭ್ರಮದಲ್ಲಿರುವ ಬಿ.ಎಸ್.ಯಡಿಯೂರಪ್ಪನವರಿಗೆ ಹಲವು ರಾಜಕೀಯ ಮುಖಂಡರು, ಸ್ವಾಮೀಜಿಗಳು ಶುಭಾಶಯ ತಿಳಿಸುತ್ತಿದ್ದಾರೆ.