ಚಾಮರಾಜನಗರ: ಹನೂರು ಪಟ್ಟಣದ ಅಭಿವೃದ್ಧಿ ದೃಷ್ಟಿಯಿಂದ ಕಾಂಗ್ರೆಸ್ ಮತ್ತು ಬಿಜೆಪಿ ಮೈತ್ರಿ ಆಗಿದೆ. ಆಯಾ ಸಮಯ- ಸಂದರ್ಭಕ್ಕೆ ತಕ್ಕಂತೆ ಮೈತ್ರಿ ಆಗುತ್ತವೆ. ಇದನ್ನು ದೊಡ್ಡ ವಿಷಯವಾಗಿ ಬಿಂಬಿಸುವುದು ಬೇಡ ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ಸಮರ್ಥಿಸಿಕೊಂಡಿದ್ದಾರೆ.
ಹನೂರು ಪಟ್ಟಣ ಪಂಚಾಯಿತಿಗೆ ಶನಿವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಅಧಿಕಾರದ ಚುಕ್ಕಾಣಿ ಹಿಡಿದಿವೆ. 13 ಸದಸ್ಯ ಬಲದ ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿಯ ಚಂದ್ರಮ್ಮ ಅಧ್ಯಕ್ಷೆಯಾಗಿ ಹಾಗೂ ಕಾಂಗ್ರೆಸ್ನ ಹರೀಶ್ ಕುಮಾರ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಸ್ಥಳೀಯ ಶಾಸಕ ಕಾಂಗ್ರೆಸ್ನ ನರೇಂದ್ರ ಅವರು ಬಿಜೆಪಿಯ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯನ್ನು ಬೆಂಬಲಿಸಿದರೆ, ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರು ಕಾಂಗ್ರೆಸ್ನ ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿಯನ್ನು ಬೆಂಬಲಿಸಿದರು.