ರಾಣೆಬೆನ್ನೂರ: ದಾವಣಗೆರೆ ಎಸ್ಪಿ ಉಮಾ ಪ್ರಶಾಂತ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಹರಿಹರ ಶಾಸಕ ಬಿ.ಪಿ. ಹರೀಶ ವಿರುದ್ಧ ಇಲ್ಲಿಯ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರೈತ ಸಂದ ತಾಲೂಕು ಅಧ್ಯಕ್ಷ ಹನುಮಂತಪ್ಪ ಕಬ್ಬಾರ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶಾಸಕ ಹರೀಶ ಎಸ್ಪಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ಐಎಎಸ್ ಅಧಿಕಾರಿ ಹಾಗೂ ಮಹಿಳಾ ಸಮಾಜಕ್ಕೆ ಅಗೌರವ ತೋರಿದ್ದಾರೆ. ಕೂಡಲೇ ಪೊಲೀಸರು ಹರೀಶ ಅವರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. ಪ್ರಮುಖರಾದ ಮಂಜುನಾಥ ಸಂಭೋಜಿ, ರಾಜು ಅಂಗಡಿ, ಮಂಜುನಾಥ ಗುಡ್ಡಣ್ಣನವರ ಮತ್ತಿತರರಿದ್ದರು.