ಬೆಂಗಳೂರು: ಸ್ಯಾಂಡಲ್ವುಡ್ ನಟಿ, ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ (Harshika Poonacha) ಅಕ್ಟೋಬರ್ 03ರಂದು ಮುದ್ದಾದ ಹೆಣ್ಣು ಮಗುವಿಗೆ (Baby Girl) ಜನ್ಮ ನೀಡಿದ್ದಾರೆ. ತಮ್ಮ ಮನೆಗೆ ಹೊಸ ಅತಿಥಿಯ ಆಗಮನವನ್ನು ದಂಪತಿ ಸಾಮಾಜಿಕ ಜಾಲತಾಣದಲ್ಲಿ ರಿವೀಲ್ ಮಾಡಿದ್ದು, ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು ದಂಪತಿಗೆ ಶುಭ ಹಾರೈಸುತ್ತಿದ್ದಾರೆ.
ನವರಾತ್ರಿಯ ಎರಡನೇ ದಿನ ದಂಪತಿ ಈ ವಿಚಾರವನ್ನ ರಿವೀಲ್ ಮಾಡಿದ್ದು, ತುಂಬು ಗರ್ಭಿಣಿ ಹರ್ಷಿಕಾ ಪೂಣಚ್ಚ ಬೇಬಿ ಶವರ್ ಪಾರ್ಟಿಯಲ್ಲಿ ಮಿಂಚಿದ್ದರು. ಬೇಬಿ ಶವರ್ ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂಗದ ಖ್ಯಾತನಾಮರು ಭಾಗಿಯಾಗಿದ್ದರು.
2023ರ ಆಗಸ್ಟ್ 24ರಂದು ಹರ್ಷಿಕಾ ಹಾಗೂ ಭುವನ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಬಳಿಕ ದಂಪತಿ ಸಿಹಿ ಸುದ್ದಿ ನೀಡಿದ್ದು, ಮಗುವಿನ ಹೆಸರನ್ನು ರಿವೀಲ್ ಮಾಡುವಂತೆ ಅಭಿಮಾನಿಗಳು ಕಮೆಂಟ್ ಮೂಲಕ ಆಗ್ರಹಿಸಿದ್ದಾರೆ.