ನವದೆಹಲಿ: ಈಚೆಗೆ ಮುಕ್ತಾಯಗೊಂಡ ಹರಿಯಾಣ (Haryana) ಹಾಗೂ ಜಮ್ಮು-ಕಾಶ್ಮೀರ (Jammu Kashmir) ವಿಧಾನಸಭೆ ಚುನಾವಣೆಯಲ್ಲಿ (Assembly Election) ಕಾಂಗ್ರೆಸ್ಗೆ ಸಿಹಿ-ಕಹಿ ಲಭಿಸಿದ್ದು, ಕಣಿವೆ ರಾಜ್ಯದಲ್ಲಿ ಗೆದ್ದು ಬೀಗುತ್ತಿರುವ ಕಾಂಗ್ರೆಸ್ ಹರಿಯಾಣದಲ್ಲಿ ಉಂಟಾದ ಸೋಲಿನಿಂದ ಹೊರಬಾರದೇ ಪರದಾಡುತ್ತಿದೆ. ಹರಿಯಾಣದಲ್ಲಿ (Haryana Assembly Election) ಉಂಟಾದ ಸೋಲಿಗೆ ಕಾರಣವನ್ನು ಹುಡುಕುತ್ತಿದ್ದು, ಇಂಡಿಯಾ ಮೈತ್ರಿಕೂಟದ ಮಿತ್ರಪಕ್ಷಗಳಿಂದ ಕಾಂಗ್ರೆಸ್ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ.
ಈ ಕುರಿತು ಕಾಂಗ್ರೆಸ್ನಾಯಕ ರಾಹುಲ್ ಗಾಂಧಿ (Rahul Gandhi), ಜಮ್ಮು ಮತ್ತು ಕಾಶ್ಮೀರದ (Jammu And Kashmir) ಜನರಿಗೆ ಹೃತ್ಪೂರ್ವಕ ಧನ್ಯವಾದಗಳು. ಕಣಿವೆ ರಾಜ್ಯದಲ್ಲಿ ಇಂಡಿಯಾ ಮೈತ್ರಿಕೂಟದ (India Alliance) ಗೆಲುವು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಗೆಲುವಾಗಿದೆ. ನಾವು ಹರಿಯಾಣದಲ್ಲಿ ಅನಿರೀಕ್ಷಿತ ಫಲಿತಾಂಶಗಳನ್ನು ವಿಶ್ಲೇಷಿಸುತ್ತಿದ್ದೇವೆ. ವಿವಿಧ ವಿಧಾನಸಭಾ ಕ್ಷೇತ್ರಗಳಿಂದ ಬರುವ ದೂರುಗಳನ್ನು ಚುನಾವಣಾ ಆಯೋಗದ ಗಮನಕ್ಕೆ ತರುತ್ತೇವೆ.
ಇದನ್ನೂ ಓದಿ: Haryana Assembly Election| ಕುಸ್ತಿ ಬಳಿಕ ರಾಜಕೀಯದಲ್ಲಿ ಹೊಸ ಇನ್ನಿಂಗ್ಸ್ ಆರಂಭಿಸಿದ Vinesh Phogat
ಕಾಂಗ್ರೆಸ್ಅನ್ನು ಬೆಂಬಲಿಸಿ ಮತ ಹಾಕಿದ ಜನರಿಗೆ ಹಾಗೂ ದಣಿವರಿಯದೆ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರಿಗೆ ನಾನು ಧನ್ಯವಾದಗಳನ್ನು ತಿಳಿಸುತ್ತೇನೆ. ನಾವು ಹಕ್ಕುಗಳಿಗಾಗಿ, ಸಾಮಾಜಿಕ, ಆರ್ಥಿಕ ಮತ್ತು ಸತ್ಯಕ್ಕಾಗಿ ಈ ಹೋರಾಟವನ್ನು ಮುಂದುವರಿಸುತ್ತೇವೆ. ನಿಮ್ಮ ಪರವಾಗಿ ಜೋರಾಗಿ ನಾವು ಧ್ವನಿ ಎತ್ತುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಟ್ವೀಟ್ (Tweet) ಮಾಡಿದ್ದಾರೆ.
ಮುಂಬರುವ ಜಾರ್ಖಂಡ್(Jharkhand) ಹಾಗೂ ಮಹಾರಾಷ್ಟ್ರ (Maharashtra) ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ವ್ಯಾಖ್ಯಾನಿಸಲಾಗಿದ್ದ ಹರಿಯಾಣ ಮತ್ತು ಜಮ್ಮು-ಕಾಶ್ಮೀರ ಎಲೆಕ್ಷನ್ ರಿಸಲ್ಟ್ ಬಿಜೆಪಿ ಪಾಳಯದಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದ್ದು, ಕಾಂಗ್ರೆಸ್ ಪಾಳಯ ಈ ಎರಡು ರಾಜ್ಯಗಳನ್ನು ಗೆಲ್ಲಲು ತಂತ್ರ ಹೆಣೆಯುತ್ತಿದೆ.