ನ್ಯೂಸ್

40 ವಿದ್ಯಾರ್ಥಿಗಳಿದ್ದ ಶಾಲಾ ಬಸ್​ ಪಲ್ಟಿ, ಆರು ಮಕ್ಕಳು ಸಾವು

ಹರಿಯಾಣ: 40 ವಿದ್ಯಾರ್ಥಿಗಳಿದ್ದ ಖಾಸಗಿ ಶಾಲಾ ಬಸ್​ ಪಲ್ಟಿಯಾಗಿ ಆರು ಮಕ್ಕಳು ಸಾವನ್ನಪ್ಪಿದ್ದಾರೆ. ಮಹೇಂದ್ರಗಢ ಜಿಲ್ಲೆಯ ಕನಿನಾ ದಾದ್ರಿ ರಸ್ತೆಯಲ್ಲಿ ಗುರುವಾರ ಮುಂಜಾನೆ ಸಂಭವಿಸಿದೆ.

ಪ್ರಾಥಮಿಕ ವರದಿಗಳ ಪ್ರಕಾರ, ಈ ಅಪಘಾತದಲ್ಲಿ ಆರು ಮಕ್ಕಳು ಸಾವನ್ನಪ್ಪಿದ್ದಾರೆ. ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಹೇಂದ್ರಗಢದಲ್ಲಿ ವಾಹನವನ್ನು ಓವರ್‌ಟೇಕ್ ಮಾಡುವಾಗ ಬಸ್ ಪಲ್ಟಿಯಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

ನಾಲ್ವರು ವಿದ್ಯಾರ್ಥಿಗಳಿಗೆ ವೆಂಟಿಲೇಟರ್‌ನಲ್ಲಿ ಇರಿಸಲಾಗಿದ್ದು, 15 ಗಾಯಗೊಂಡ ವಿದ್ಯಾರ್ಥಿಗಳನ್ನು ಬೇರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತಕ್ಕೆ ಚಾಲಕ ಓವರ್​ಟೇಕ್​ ಮಾಡಿದ್ದೇ ಕಾರಣ ಎನ್ನಲಾಗಿದೆ.