ಹಾಸನ: ಅರಕಲಗೂಡು ಶಾಸಕ ಎ.ಟಿ.ರಾಮಸ್ವಾಮಿ ಜೆಡಿಎಸ್ ತೊರೆದು ನಿನ್ನೆಯಷ್ಟೇ ದೆಹಲಿಯಲ್ಲಿ ಬಿಜೆಪಿಯನ್ನು ಅಧಿಕೃತವಾಗಿ ಸೇರಿದ್ದರು. ಇದೀಗ ಇನ್ನೊಬ್ಬ ಶಾಸಕ ಕೂಡ ಜೆಡಿಎಸ್ಗೆ ವಿದಾಯ ಹೇಳಿದ್ದು, ದಳಪತಿಗಳಿಗೆ ಮತ್ತೊಂದು ಹಿನ್ನಡೆ ಎಂಬಂತಾಗಿದೆ.
ಹಾಸನ-ಅರಸೀಕೆರೆ ಶಾಸಕ ಶಿವಲಿಂಗೇಗೌಡ ಇಂದು ಜೆಡಿಎಸ್ಗೆ ಅಧಿಕೃತವಾಗಿ ವಿದಾಯ ಹೇಳಿದ್ದಾರೆ. ಶಿವಲಿಂಗೇಗೌಡ ಇಂದು ಅಧಿಕೃತವಾಗಿ ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿ, ಶಾಸಕ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ.
ಇದನ್ನೂ ಓದಿ: ಅರಕಲಗೂಡಿನ ಶಾಸಕ ಎ.ಟಿ.ರಾಮಸ್ವಾಮಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆ; ದೆಹಲಿಯಲ್ಲಿ ಪಕ್ಷಕ್ಕೆ ಸ್ವಾಗತಿಸಿದ ನಡ್ಡಾ
ಶಿವಲಿಂಗೇಗೌಡ ಮುಂದೆ ಕಾಂಗ್ರೆಸ್ ಸೇರ್ಪಡೆ ಆಗುವುದು ಖಚಿತ ಹಾಗೂ ಇದೇ ಚುನಾವಣೆಯಲ್ಲೇ ಸ್ಪರ್ಧೆ ಮಾಡಲಿದ್ದಾರೆ ಎಂಬ ಸುಳಿವನ್ನು ಅರಸೀಕೆರೆಗೆ ಆಗಮಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ್ದರು. ಮತ್ತೊಂದೆಡೆ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಕೆಲವು ಮೂಲ ಕಾಂಗ್ರೆಸ್ ನಾಯಕರ ಆಕ್ಷೇಪವಿದೆ ಎಂದೂ ಹೇಳಲಾಗುತ್ತಿದೆ. ಒಟ್ಟಿನಲ್ಲಿ ಈ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಕಾವೇರಿದಂತಾಗಿದೆ.