ನ್ಯೂಸ್

ರೈತರ ಹೋರಾಟಕ್ಕೆ ಶಿವರಾಜ್​ಕುಮಾರ್​ ಬೆಂಬಲ

ಬೆಂಗಳೂರು: ಹೊಸ ಕೃಷಿ ಕಾನೂನು ಹಿಂಪಡೆಯುವಂತೆ ಆಗ್ರಹಿಸಿ ರೈತಪರ ಸಂಘಟನೆಗಳು ಕೇಂದ್ರ ಸರ್ಕಾರದ ದೇಶದಾದ್ಯಂತ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿವೆ.

ಕಗ್ಗಂಟಾಗುತ್ತಲೇ ಬಂದ ರೈತರ ಪ್ರತಿಭಟನೆ ಇಂದು(ಡಿ.8) ಭಾರತ್ ಬಂದ್ ಮಟ್ಟಕ್ಕೆ ಬಂದಿದ್ದು, ದೇಶದ ಉದ್ದಗಲಕ್ಕೂ ರೈತರು ಬೀದಿಗಿಳಿದು ಹೋರಾಡುತ್ತಿದ್ದಾರೆ. ಈ ನಡುವೆ ಸ್ಯಾಂಡಲ್​ವುಡ್​ನ ಹ್ಯಾಟ್ರಿಕ್​ ಹೀರೋ ಶಿವರಾಜ್​ಕುಮಾರ್ ಕೂಡ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.

'ರೈತ ದೇಶದ ಬೆನ್ನೆಲುಬು, ರೈತ ಇದ್ರೇನೆ ದೇಶ. ಅವರ ಕಷ್ಟಕ್ಕೆ ನಾವು ಯಾವಾಗಲೂ ಜತೆ ಇರುತ್ತೇವೆ, ಅವರ ಹೋರಾಟಕ್ಕೆ ನಮ್ಮ ಬೆಂಬಲ ಇದೆ' ಎಂದು ಶಿವರಾಜ್​ಕುಮಾರ್​ ಟ್ವೀಟ್​ ಮಾಡಿದ್ದಾರೆ.

ದೆಹಲಿಯಲ್ಲಿ ಎರಡು ವಾರದಿಂದ ಪ್ರತಿಭಟನೆ ನಡೆಸುತ್ತಿರುವ ರೈತಪರ ಸಂಘಟನೆಗಳು ಕರೆನೀಡಿದ್ದ ಭಾರತ್​ ಬಂದ್​ಗೆ ಕರ್ನಾಟಕದಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.