ಬೆಳಗಾವಿ: ನಮ್ಮಲಿರುವ ಸಾಮರ್ಥ್ಯ ನಂಬಿ ಕೆಲಸ ಮಾಡಿದಾಗ ಮಾತ್ರ ಯಶಸ್ಸು ಗಳಿಸಲು ಸಾಧ್ಯ ಎಂದು ನಗರ ಉಪ ಪೊಲೀಸ್ ಆಯುಕ್ತ ರೋಹನ್ ಜಗದೀಶ ಹೇಳಿದರು
ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಸಭಾಂಗಣದಲ್ಲಿ ಈಚೆಗೆ ನಡೆದ ಪ್ರಥಮ ವರ್ಷದ ಎಂಬಿಎ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಒಂದು ದಿನದ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅತಿಥಿಯಾಗಿ ಆಗಮಿಸಿದ್ದ ಬೆಳಗಾವಿಯ ಟೀ ಟೋಸ್ಟ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಅಕ್ಷಯ್ ಕುಲಕರ್ಣಿ ಮಾತನಾಡಿದರು. ವಿಟಿಯು ಕುಲಪತಿ ಪ್ರೊ.ವಿದ್ಯಾಶಂಕರ ಅಧ್ಯಕ್ಷತೆ ವಹಿಸಿದ್ದರು. ಬೆಳಗಾವಿಯ ಟೀ ಟೋಸ್ಟ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಅಕ್ಷಯ್ ಕುಲಕರ್ಣಿ, ಕುಲಸಚಿವ ಪ್ರೊ. ಬಿ.ಈ.ರಂಗಸ್ವಾಮಿ, ಹಣಕಾಸು ಅಧಿಕಾರಿ ಡಾ. ಪ್ರಶಾಂತ ನಾಯಕ, ಎಂಬಿಎ ವಿಭಾಗದ ಅಧ್ಯಕ್ಷ ಪ್ರೊ. ಪ್ರಹ್ಲಾದ್ ರಾಥೋಡ್ ಇತರರಿದ್ದರು. ಪ್ರೊ.ದೀಪ್ತಿ ಶೆಟ್ಟಿ ನಿರೂಪಿಸಿ, ವಂದಿಸಿದರು.