ಹಾವೇರಿ: ಪ್ರತಿಯೊಬ್ಬ ವಿದ್ಯಾಥಿರ್ಯೂ ಕಡ್ಡಾಯವಾಗಿ ಕ್ರೀಡಾಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಕ್ರೀಡಾ ಸ್ಫೂತಿರ್ ಬೆಳೆಸಿಕೊಳ್ಳುವುದು ಅವಶ್ಯಕ ಎಂದು ಕೆಎಲ್ಇ ಬಿಸಿಎ ಕಾಲೇಜಿನ ಪ್ರಾಚಾರ್ಯ ವೆಂಕಟೇಶ ಕಲಾಲ ಹೇಳಿದರು.
ನಗರದ ಕೆಎಲ್ಇ ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದಲ್ಲಿ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗ ಆಯೋಜಿಸಿದ್ದ 2024&-25ನೇ ಸಾಲಿನ 61ನೇ ವಾಷಿರ್ಕ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ವೈಯಕ್ತಿಕ ಓರೆಕೋರೆಗಳನ್ನು ತಿದ್ದಿಕೊಂಡು ಹೊಂದಾಣಿಕೆಯ ಮನೋಭಾವವನ್ನು ಬೆಳೆಸಿಕೊಳ್ಳಲು ಕ್ರೀಡೆ ನೆರವಾಗುತ್ತದೆ. ದೈಹಿಕ, ಮಾನಸಿಕ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಈ ಮೂಲಕ ಧೈರ್ಯ ಮತ್ತು ಸಾಹಸ ಗುಣಗಳನ್ನು ವೃದ್ಧಿಸುತ್ತದೆ. ಕ್ರೀಡಾಕ್ಷೇತ್ರವು ಇಚ್ಛಾಶಕ್ತಿ, ಏಕಾಗ್ರತೆ ಮತ್ತು ಸ್ಪರ್ಧಾ ಮನೋಭಾವವನ್ನು ಬೆಳೆಸುತ್ತದೆ. ನಿರಂತರವಾದ ಕಠಿಣ ಪ್ರಯತ್ನದಿಂದ ಮಾತ್ರ ಸಾಧನೆ ಮಾಡಲು ಸಾಧ್ಯ. ಸೋಲು ಕೊನೆಯಲ್ಲ. ಸೋಲೇ ಗೆಲುವಿನ ಸೋಪಾನ. ಕ್ರೀಡೆಯಲ್ಲಿ ಪರಿಣಿತರಾದವರಿಗೆ ಶ್ಯೆಕ್ಷಣಿಕ ಕ್ಷೇತ್ರದಲ್ಲೂ ಹಲವಾರು ಅವಕಾಶಗಳಿವೆ. ಭಾಗವಹಿಸಿದ ಎಲ್ಲಾ ಕ್ರೀಡಾಪಟುಗಳಿಗೆ ಉಜ್ವಲ ಭವಿಷ್ಯವಿದೆ. ಕ್ರೀಡೆಯ ಮುಂದಿನ ಹಂತದ ಸ್ಪರ್ಧೆಗಳಿಗೆ ತಯಾರಿಯನ್ನು ಮಾಡಿಕೊಳ್ಳಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಎಂ.ಎಂ. ಹೊಳ್ಳಿ ಮಾತನಾಡಿ, ಕ್ರೀಡೆಯಿಂದ ಶಿಸ್ತು, ಸಂಯಮ ಮತ್ತು ಆರೋಗ್ಯ ವೃದ್ಧಿಸುತ್ತದೆ. ಕ್ರೀಡೆಯಲ್ಲಿ ಗೆಲ್ಲಲು ಉತ್ತಮ ತರಬೇತಿ ಅಗತ್ಯ. ಪರಿಣತಿಯನ್ನು ಗಳಿಸಲು ಸತತ ಸಾಧನೆ ಮಾಡಬೇಕಿದೆ. ಗ್ರಾಮೀಣ ಪ್ರದೇಶದ ಮಕ್ಕಳ ಪ್ರತಿಭೆ ಗುರುತಿಸಲು ಕಾಲೇಜು ಹಂತದ ಕ್ರೀಡಾಕೂಟಗಳು ಸಹಕಾರಿಯಾಗಿದ್ದು, ಇದರಿಂದ ವಿದ್ಯಾಥಿರ್ಗಳ ನಡುವೆ ಸೋದರ ಸಂಬಂಧ ಬೆಳೆಯಲಿವೆ. ಕ್ರೀಡೆಯ ಜೊತೆಗೆೆ ವಿದ್ಯಾಥಿರ್ಗಳು ಜೀವನದಲ್ಲಿ ಶಿಸ್ತು ರೂಢಿಸಿಕೊಳ್ಳಬೇಕು. ಯಾವ ವಿದ್ಯಾಥಿರ್ ಜೀವನದಲ್ಲಿ ಶಿಸ್ತು ಬೆಳೆಸಿಕೊಳ್ಳುತ್ತಾನೋ ಭವಿಷ್ಯದಲ್ಲಿ ಉತ್ತಮ ಪ್ರಜೆಯಾಗಿ ಹೊರಹೊಮ್ಮುತ್ತಾನೆ ಎಂದರು.
ಪದವಿ ಪೂರ್ವ ಪ್ರಾಚಾಯೆರ್ ಡಾ. ಜ್ಯೋತಿಬಾ ಶಿಂಧೆ, ಎಂಕಾಂ ಸಂಯೋಜಕ ಡಾ. ಜಿ.ಎಸ್. ಬಾಕಿರ್, ಡಾ. ಜೆ.ಎಫ್. ಹೊಸಮನಿ, ಡಾ. ಎಸ್.ಆರ್. ಕೋರಿಶೆಟ್ಟರ, ಜಿ.ಕೆ. ಮಂಕಣಿ, ಹೇಮಂತಕುಮಾರ್, ಆರ್.ಬಿ. ಅಜರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.
ನಯನಾ ಎಸ್. ಪ್ರಾಥಿರ್ಸಿದರು. ಕ್ರೀಡಾ ವಿಭಾಗದ ಸಂಯೋಜಕ ಡಾ. ಎಸ್.ಆರ್. ನಾಯಕ ಸ್ವಾಗತಿಸಿದರು. ದೈಹಿಕ ಶಿಕ್ಷಣ ನಿರ್ದೇಶಕಿ ಪೂಜಾ ಎಂ. ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀದೇವಿ ದೊಡ್ಡಮನಿ ನಿರ್ವಹಿಸಿದರು. ಶ್ರೀಕಾಂತ ಗುಡಗುಡಿ ವಂದಿಸಿದರು.