ರಾಣೆಬೆನ್ನೂರ: ಹಾವೇರಿ ವಿಶ್ವವಿದ್ಯಾಲಯ ಮುಚ್ಚುವ ತೀಮಾರ್ನ ಖಂಡಿಸಿ ಹಾಗೂ ನೂತನ ವಿಶ್ವ ವಿದ್ಯಾಲಯಗಳಿಗೆ ಅಗತ್ಯ ಮೂಲ ಸೌಕರ್ಯ ಒದಗಿಸಿ ಮುಂದುವರಿಸುವಂತೆ ಆಗ್ರಹಿಸಿ ಭಾರತ ವಿದ್ಯಾಥಿರ್ ಫೆಡರೇಷನ್ (ಎಸ್ಎಫ್ಐ) ತಾಲೂಕು ಟಕದ ವತಿಯಿಂದ ಗುರುವಾರ ನಗರದ ಮಿನಿ ವಿಧಾನಸೌಧ ಎದುರು ಪ್ರತಿಭಟನೆ ನಡೆಸಲಾಯಿತು.
ಸಂಟನೆಯ ಜಿಲ್ಲಾಧ್ಯಕ್ಷ ಬಸವರಾಜ ಎಸ್. ಮಾತನಾಡಿ, ಕಳೆದ 2023ರಲ್ಲಿ ಆರಂಭಗೊಂಡ ಹಾವೇರಿ ವಿಶ್ವವಿದ್ಯಾಲಯ ಸೇರಿ ರಾಜ್ಯದ ವಿವಿಧ 10 ವಿವಿಗಳ ಪೈಕಿ 9 ವಿವಿಗಳನ್ನು ಮುಚ್ಚುವ ಬಗ್ಗೆ ಸಂಪುಟ ಉಪ ಸಮಿತಿ ತೀಮಾರ್ನಿಸಿರುವುದು ಆತಂಕಕಾರಿ ನಡೆಯಾಗಿದೆ. ಇದರಿಂದ ಬಡ ವಿದ್ಯಾಥಿರ್ಗಳಿಗೆ ತೊಂದರೆ ಉಂಟಾಗಲಿದೆ.
ಆದ್ದರಿಂದ ಸರ್ಕಾರ ವಿಶ್ವ ವಿದ್ಯಾಲಯಗಳಿಗೆ ಅಗತ್ಯ ಅನುದಾನ ನೀಡಿ ಮುಂದುವರಿಸಬೇಕು. ಯಾವ ಕಾರಣಕ್ಕೂ ವಿಶ್ವ ವಿದ್ಯಾಲಯಗಳನ್ನು ಮುಚ್ಚಬಾರದು ಎಂದು ಒತ್ತಾಯಿಸಿದರು. ತಹಸೀಲ್ದಾರ್ ಆರ್.ಎಚ್. ಭಾಗವಾನ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ತಾಲೂಕು ಅಧ್ಯಕ್ಷ ಗೌತಮ ಸಾವಕ್ಕನವರ, ಉಪಾಧ್ಯಕ್ಷ ಮಹೇಶ ಮರೋಳ, ಕೃಷ್ಣ ನಾಯಕ, ವಿನಾಯಕ ಮಡಿವಾಳರ, ಮದನ ಹರಿಜನ, ಪರಮೇಶ ಮಲ್ಲಾಡದ, ವಾಸುದೇವ ವಿ. ಮತ್ತಿತರರು ಉಪಸ್ಥಿತರಿದ್ದರು.