ಮೈಸೂರು: ಇಂದು ತಮ್ಮ ತವರೂರು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯ ಭ್ರಷ್ಟಾಚಾರದ ಆರೋಪಕ್ಕೆ ವಿಧಾನಸಭೆ ಅಧಿವೇಶನದಲ್ಲಿ ಉತ್ತರ ಕೊಡಲಿದ್ದೇವೆ ಎಂದರು.
ಇದನ್ನೂ ಓದಿ: BBKS10: ವಾರ ‘ಆರು’, ಮನೆಯಿಂದ ಹೊರಹೋಗುವವರು ‘ಯಾರು’?
"ರಾಜ್ಯದಲ್ಲಿ ದ್ವೇಷದ ರಾಜಕಾರಣ ಮಾಡದೇ, ಶಾಂತಿಯುತವಾದ ವಾತಾವರಣವನ್ನು ಸರ್ಕಾರ ನಿರ್ಮಿಸುತ್ತಿದೆ. ಬಿಜೆಪಿ ಸರ್ಕಾರದ ವಿರುದ್ಧ ಮಾಡುತ್ತಿರುವ ಭ್ರಷ್ಟಾಚಾರದ ಆರೋಪಗಳಿಗೆ ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಉತ್ತರವನ್ನು ನೀಡಲಾಗುವುದು" ಎಂದು ತಿಳಿಸಿದರು.
ಬಿಜೆಪಿ ಆರ್. ಅಶೋಕ್ ಅವರನ್ನು ಪ್ರತಿಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, "ಪ್ರತಿಪಕ್ಷದ ನಾಯಕರು ಯಾರಾದರೂ ನಮಗೆ ಅಭ್ಯಂತರವಿಲ್ಲ. ಜನರ ಆಶೀರ್ವಾದದಿಂದ ಸರ್ಕಾರ ರಚಿಸಿರುವ ನಮ್ಮ ಕಾಂಗ್ರೆಸ್ ಸರ್ಕಾರ ಜನರಿಗೆ ನೀಡಿರುವ ಆಶ್ವಾಸನೆಗಳನ್ನು ಈಡೇರಿಸುತ್ತಿದೆ" ಎಂದರು.
ಇದನ್ನೂ ಓದಿ: ಕ್ರಯಪತ್ರ ಆದೇಶಕ್ಕೆ ರೂಲ್ಸ್ ವಿಘ್ನ ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಖರೀದಿದಾರರ ಸಮಸ್ಯೆಗೆ ಇಲ್ಲ ಮುಕ್ತಿ
ಎಚ್.ಡಿ. ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ, "ವಿವೇಕಾನಂದ ಎಂಬುವವರು ಮೈಸೂರು ಗ್ರಾಮಾಂತರ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿದ್ದಾರೆ. ಅವರ ಬಗ್ಗೆ ಮಾತನಾಡಲಾಗಿದೆಯೇ ಹೊರತು ಪೋಲಿಸ್ ಅಧಿಕಾರಿ ಬಗ್ಗೆಯಲ್ಲ. ವಿವಿಪುರಂ ಇನ್ಸ್ಪೆಕ್ಟರ್ ವಿವೇಕಾನಂದ ಚಾಮರಾಜ ವಿಧಾನಸಭಾ ಕ್ಷೇತ್ರಕ್ಕೆ, ವರ್ಗಾವಣೆಯಾಗಿರುವ ಬಗ್ಗೆ ಸ್ಥಳೀಯ ಶಾಸಕರನ್ನು ಕೇಳಲಿ" ಎಂದರು.
ಇನ್ನು ಕಾಂಗ್ರೆಸ್ ವಿರುದ್ಧ ಬಿಜೆಪಿ ಪೋಸ್ಟರ್ ಚಳವಳಿ ಪ್ರಾರಂಭಿಸಿರುವ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, "ಜನ ಬಿಜೆಪಿಯವರಿಗೆ ತಕ್ಕ ಪಾಠ ಕಲಿಸಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಸೇರಿ ಸಮ್ಮಿಶ್ರ ಸರ್ಕಾರ ರಚಿಸುವ ಕನಸು ಕಂಡಿದ್ದರು. ಆದ್ರೆ, ಜನ ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನಗಳನ್ನು ನೀಡಿದ್ದು, ಅವರನ್ನು ಆತಂಕಕ್ಕೆ ದೂಡಿದೆ. ಇದರಿಂದ ಅರ್ಥವಿಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ" ಎಂದು ಹೇಳಿದರು.