ನ್ಯೂಸ್

ಹೆಚ್​ಡಿ ದೇವೇಗೌಡಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದ ಬೆಂಗಳೂರು ವಿವಿ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ ದೇವೇಗೌಡ ಹಾಗೂ  ಇಸ್ರೋ ಅಧ್ಯಕ್ಷ ಸೋಮನಾಥ್ ಅವರಿಗೆ ಇಂದು ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

ಇಂದು(ಅಕ್ಟೋಬರ್ 17) ಸೆಂಟ್ರಲ್ ಕಾಲೇಜು ಆವರಣದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಬೆಂಗಳೂರು ವಿಶ್ವವಿದ್ಯಾಲಯದ 58ನೇ ವಾರ್ಷಿಕ ಘಟಿಕೋತ್ಸವದಲ್ಲಿ ದೇವೇಗೌಡ ಅವರಿಗೆ ಗೌರವ ಡಾಕ್ಟರೇಟ್ ನೀಡಿಲಾಗಿದೆ. ಇನ್ನು ದೇವೇಗೌಡ ಅವರು ಸಹ ಡಾಕ್ಟರೇಟ್ ಪದವಿ ಪಡೆದುಕೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ಗೌರವ ಡಾಕ್ಟರೇಟ್  ಪ್ರದಾನ ಸ್ವೀಕರಿಸಿದ ಬಳಿ ಮಾತನಾಡಿದ ಹೆಚ್‍ಡಿಡಿ, ಬೆಂಗಳೂರು ವಿವಿ ಲಕ್ಷಾಂತರ ವಿದ್ಯಾರ್ಥಿಗಳ ಜ್ಞಾನ ಭಂಡಾರ. ಉನ್ನತ ಶಿಕ್ಷಣದಲ್ಲಿ ಉತೃಷ್ಕೃತೆಯನ್ನು ಸಾಧಿಸಿದೆ. ಈ ವಿವಿ ಬಗ್ಗೆ ನನಗೆ ಅಪಾರ ಗೌರವ ಇದೆ. ವಿದ್ಯೆ ಕಾಗದದ ಸರ್ಟಿಫಿಕೇಟ್ ಆಗಬಾರದು. ವಿದ್ಯೆ ಸಂಸ್ಕಾರವನ್ನು ಒಳಗೊಂಡಿರಬೇಕು. ಇಸ್ರೋ ಅಧ್ಯಕ್ಷ ಸೋಮನಾಥ್ ಅವರಿಗೆ ವಿಶೇಷ ಅಭಿನಂದನೆ ಸಲ್ಲಿಸುತ್ತೇನೆ. ಸೋಮನಾಥ್ ಅವರಿಗೆ ಗೌರವ ಡಾಕ್ಟರೇಟ್ ಸಂದಿರುವುದು ಸಂತಸ ತಂದಿದೆ ಎಂದಿದ್ದಾರೆ.

ವಿವಿ ಇಸ್ರೋ ಅಧ್ಯಕ್ಷ ಸೋಮನಾಥ್ ಅವರಿಗೂ ಡಾಕ್ಟರೇಟ್​ ಪ್ರದಾನ ಮಾಡಲು ತೀರ್ಮಾನಿಸಿತ್ತು. ಆದ್ರೆ, ಅವರು ಪೂರ್ವ ನಿಯೋಜಿತ ಕಾರ್ಯಕ್ರಮದ ಘಟಿಕೋತ್ಸವಕ್ಕೆ ಗೈರಾಗಿದ್ದಾರೆ. ಇನ್ನು ಗೈರಾಗಿರುವುದಕ್ಕೆ ಸೋಮನಾಥ್ ಅವರು ವಿಡಿಯೋ ಸಂದೇಶ ರವಾನಿಸಿದ್ದು, ಗೌರವ ಡಾಕ್ಟರೇಟ್ ಪದವಿಗೆ ನನ್ನನ್ನು ಆಯ್ಕೆ ಮಾಡಿದ್ದಕ್ಕೆ ಧನ್ಯವಾದ. ಇದು ನನಗೆ ಮಾತ್ರವಲ್ಲ, ಇಸ್ರೋಗೆ ಸಂದಿರುವ ಗೌರವ ದೇವೇಗೌಡ ಅವರಿಗೆ ಗೌರವ ಡಾಕ್ಟರೇಟ್ ಪದವಿ‌ ನೀಡಿರುವುದು ಸಂತಸ ತಂದಿದೆ. ಬೆಂಗಳೂರು ವಿವಿ ನೀಡಿರುವ ಗೌರವ ಡಾಕ್ಟರೇಟ್ ಪದವಿಯನ್ನು ನಾನು ಅತ್ಯಂತ ಸಂತೋಷದಿಂದ ಸ್ವೀಕರಿಸುತ್ತೇನೆ. ಇಂದಿನ ಹಲವು ಪ್ರಮುಖ ಕಾರ್ಯಕ್ರಮಗಳ ನಿಮಿತ್ತ ನಾನು ಅಲ್ಲಿಗೆ ಬಂದು ಪದವಿ ಸ್ವೀಕರಿಸಲು ಸಾಧ್ಯವಾಗಿಲ್ಲ. ಸಾಮಾನ್ಯ ಮನುಷ್ಯನಿಗೂ ಬಾಹ್ಯಾಕಾಶ ಕ್ಷೇತ್ರದ ಪ್ರತಿ ಕಾರ್ಯವೂ ಉಪಯೋವಾಗುತ್ತ ಇಸ್ರೋ ಶ್ರಮಿಸಲಿದೆ ಎಂದಿದ್ದಾರೆ.