ನ್ಯೂಸ್

ಸದ್ಯಕ್ಕೆ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ, ಮುಂದೆ ಕಾದುನೋಡಿ: ಎಚ್​ಡಿಕೆ

ಮೈಸೂರು: ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಒಬ್ಬ ಕಲೆಗಾರ. ಅವರಿಗೆ ಸರ್ಕಾರ ಬೀಳಿಸುವ ಹಾಗೂ ರಚಿಸುವ ಕಲೆ ಚೆನ್ನಾಗಿ ಗೊತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದರು.

ಯಡಿಯೂರಪ್ಪ ಅವರು ಹಿಂದೆ ಏನೆಲ್ಲ ಮಾಡಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ. ಅವರು ಬೆಳಗ್ಗೆ ಒಂದು ತೀರ್ಮಾನ, ಮಧ್ಯಾಹ್ನ ಹಾಗೂ ರಾತ್ರಿ ಒಂದೊಂದು ತೀರ್ಮಾನ ಮಾಡುತ್ತಾರೆ. 105 ಜನ ಬಿಜೆಪಿ ಶಾಸಕರು ಕಡುಬು ತಿಂದುಕೊಂಡು ಸುಮ್ಮನೆ ಇರುತ್ತಾರಾ. ಸದ್ಯ ಈಗ ಎಲ್ಲರೂ ಸುಮ್ಮನೆ ಇದ್ದಾರೆ. ಮುಂದೆ ಕಾದು ನೋಡಿ ಎಂದರು.

10 ಮಂದಿ ಶಾಸಕರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರಿಗೆ ದೇವರು ಒಳ್ಳೆಯದನ್ನು ಮಾಡಲಿ. ಅವರು ಜನರಿಗೆ ಒಳ್ಳೆ ಸೇವೆ ಒದಗಿಸಲಿ ಎಂದರು. (ದಿಗ್ವಿಜಯ ನ್ಯೂಸ್​)