ನ್ಯೂಸ್

ನಾನು ಯಾವುದೇ ಕಾರಣಕ್ಕೂ ರಾಜಕೀಯ ಬಿಡಲ್ಲ: ಎಚ್​ಡಿಕೆ

ರಾಮನಗರ: 2023ರ ಚುನಾವಣೆ ನನ್ನ ಕೊನೆಯ ಚುನಾವಣೆ. 2028ರ ಚುನಾವಣೆಗೆ ನಿಮ್ಮಲ್ಲೇ ಒಬ್ಬರು ಅಭ್ಯರ್ಥಿ ಆಗಬೇಕು ಎಂದು ಚನ್ನಪಟ್ಟಣದಲ್ಲಿ ನಡೆದ ಬಮೂಲ್ ಉತ್ಸವದಲ್ಲಿ ತಾವು ಹೇಳಿರುವ ವಿಚಾರವಾಗಿ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

2023ರ ವಿಧಾನಸಭಾ ಚುನಾವಣೆ ಕೊನೆಯ ಚುನಾವಣೆ ಎಂಬ ಹೇಳಿಕೆ ವಿಚಾರವಾಗಿ ಚನ್ನಪಟ್ಟಣದಲ್ಲಿ ಮಾತನಾಡಿ, ನಾನು ರಾಜಕೀಯ ವಿದಾಯ ಹೇಳುತ್ತಿಲ್ಲ. 2028ರ ವಿಧಾನಸಭೆಗೆ ಚನ್ನಪಟ್ಟಣದಿಂದ ಕಾರ್ಯಕರ್ತರನ್ನು ನಿಲ್ಲಿಸುತ್ತೇನೆ. ಆಗ ನಾನು ಬೇರೆ ಕ್ಷೇತ್ರದಲ್ಲಿ ನಿಲ್ಲಬೇಕಾಗಬಹುದು. ನಾನು ಯಾವುದೇ ಕಾರಣಕ್ಕೂ ರಾಜಕೀಯ ಬಿಡಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ನಾನು ಚನ್ನಪಟ್ಟಣದಲ್ಲಿ ಮಾತ್ರ 2023ಕ್ಕೆ ಕೊನೆಯ ಸ್ಪರ್ಧೆ ಮಾಡುತ್ತೇನೆ. 2028ಕ್ಕೆ ಚನ್ನಪಟ್ಟಣದಿಂದ ಕಾರ್ಯಕರ್ತರನ್ನ ನಿಲ್ಲಿಸಿ ಗೆಲ್ಲಿಸುತ್ತೇನೆ. ಈ ಸಲ ಐದು ವರ್ಷದ ಸರ್ಕಾರ ತಂದು ಜನತೆಯ ಬದುಕಿಗೆ ಭರವಸೆ ಈಡೇರಿಸುವ ಕೆಲಸ ಮಾಡಬೇಕಾಗಿದೆ. ನಂತರ ನಾನು ರೆಸ್ಟ್ ತೆಗೆದುಕೊಳ್ಳ ಬೇಕಲ್ಲಾ? ಅದಕ್ಕೆ ಕೊನೆಯ ವಿಧಾನಸಭೆ ಚುನಾವಣೆ ಅಂದೆ ಅಷ್ಟೇ ಎಂದು ಹೇಳಿದ್ದಾರೆ.