ಬೆಂಗಳೂರು: ಲೈಂಗಿಕ ಕಿರುಕುಳ ಹಾಗೂ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳದ (SIT) ವಶದಲ್ಲಿರುವ ಮಾಜಿ ಸಚಿವ, ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣಗೆ ಮತ್ತೊಮ್ಮೆ ಸಂಕಷ್ಟ ಎದುರಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ವಶದಲ್ಲಿರುವ ರೇವಣ್ಣ ಅವರಿಗೆ ನ್ಯಾಯಾಲಯ ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣರನ್ನು ನ್ಯಾಯಾಲಯ ಮೂರು ದಿನಗಳ ಕಾಲ ಎಸ್ಐಟಿ ವಶಕ್ಕೆ ನೀಡಿತ್ತು. ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಲಯ ರೇವಣ್ಣರನ್ನು ಮೇ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣರನ್ನು ಅಧಿಕಾರಿಗಳು ಎಸ್ಐಟಿ ಕಚೇರಿಯಿಂದ ಪರಪ್ಪನ ಅಗ್ರಹಾರಕ್ಕೆ ಸ್ಥಳಾಂತರಿಸಲಿದ್ದಾರೆ. ಕೆ.ಆರ್.ನಗರ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ರೇವಣ್ಣ ಅವರನ್ನು 7 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯ ಆದೇಶ ಪ್ರಕಟಿಸಿದೆ.