ಬೆಂಗಳೂರು: ದೇವೇಗೌಡರು(HDD), ಕುಮಾರಸ್ವಾಮಿ ಒಂದೇ ದಿನದಲ್ಲಿ ಮೋದಿ ಅವರ ಕೈಯಿಂದ ಮೇಕೆದಾಟಿಗೆ ಸಹಿ ಹಾಕಿಸುವುದಾಗಿ ಹೇಳಿದ್ದರು. ಅದಕ್ಕಾಗಿ ಕ್ಷಣಗಣನೆಗೆ ಕಾಯುತ್ತಿದ್ದೇನೆ ಎಂದು DK ಶಿವಕುಮಾರ್ ಎಂದು ವ್ಯಂಗ್ಯವಾಡಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಣೆ ಮಾಡಿದ್ದ 5,300 ಕೋಟಿ ರೂ. ಕೊಟ್ಟಿಲ್ಲ, ಆದರೆ ಈ ಯೋಜನೆಗಳಿಗೆ ಹಣ ನೀಡುತ್ತಾರಾ ಎಂಬ ಪ್ರಶ್ನೆಗೆ, ನೋಡೋಣ, ರಾಜ್ಯದಿಂದ ಇಷ್ಟೊಂದು ಸಂಸದರು ಇದ್ದಾರೆ, ಕರ್ನಾಟಕ ರಾಜ್ಯಕ್ಕೆ ಮೋಸ ಮಾಡುವುದಿಲ್ಲ, ಅನುದಾನ ಕೊಡುತ್ತಾರೆ ಎಂಬ ನಂಬಿಕೆ ಮೇಲೆ ಕೇಳಿದ್ದೇವೆ. ಪ್ರಹ್ಲಾದ್ ಜೋಷಿ ಹಾಗೂ ಜಗದೀಶ್ ಶೆಟ್ಟರ್ ಅವರು ಕಳಸಾ ಬಂಡೂರಿ ಯೋಜನೆಗೆ ಅರಣ್ಯ ಇಲಾಖೆಯಿಂದ ಅನುಮತಿ ಕೊಡಿಸುತ್ತಾರೆ ಎಂದು ಕಾಯುತ್ತಿದ್ದೇನೆ. ನಾವು ಈ ವಿಚಾರವಾಗಿ ಮನವಿ ಮಾಡಿದ್ದೇವೆ. ಮುಖ್ಯಮಂತ್ರಿಗಳು ಪತ್ರ ಬರೆದಿದ್ದಾರೆ. ಸಂಸತ್ ಕಲಾಪದ ವೇಳೆಯೂ ಹೋಗಿ ಭೇಟಿ ಮಾಡುತ್ತೇನೆ. ನನ್ನ ಕರ್ತವ್ಯ ಮಾಡುತ್ತೇನೆ. ಫಲಾಫಲ ಭಗವಂತನಿಗೆ ಬಿಟ್ಟದ್ದು ಎಂದರು.
ಇದನ್ನೂ ಓದಿ:ಮಾಸ್ಕ್ ಧರಿಸಿ ಮುಖ ಮುಚ್ಚಿಕೊಳ್ಳುವ ಹೆಣ್ಣು ನಾನಲ್ಲ! ಆತನಿಗೆ ನಾಚಿಕೆಯಾಗಬೇಕು: ಶ್ರಾಸ್ತಿ | Jani Master
ಎಐಸಿಸಿ ಅಧ್ಯಕ್ಷರು ಯಾವ ಸೂಚನೆ ನೀಡಿದರು ಎಂದಾಗ, ಈ ಕಚೇರಿ ಕಟ್ಟಿದ್ದು ಅವರೇ. ಅವರು ಇಲ್ಲಿ 2 ನಿಮಿಷ ನೆಮ್ಮದಿಯಾಗಿ ಕಾಫಿಯನ್ನು ಕುಡಿಯಬಾರದೆ? ನೀವು ನಿಮ್ಮ ಮನೆಯವರು ಚರ್ಚೆ ಮಾಡಿದನ್ನು ಸಾರ್ವಜನಿಕವಾಗಿ ಮಾತನಾಡುತ್ತೀರಾ ಎಂದು ಹಾಸ್ಯ ಚಟಾಕಿ ಹಾರಿಸಿದರು.
ಇದನ್ನೂ ಓದಿ:ಮಾರಣಾಂತಿಕ ದಾಳಿ ನಂತರ ಸಾರ್ವಜನಿಕವಾಗಿ ಕಾಣಿಸಿಕೊಂಡ ಸೈಫ್; ನಟನ ಬಿಗಿ ಭದ್ರತೆ ವಿಡಿಯೋ ವೈರಲ್ | Saif Ali Khan
ಕುಟುಂಬ ಬೇರೆ ರಾಜಕೀಯ ಬೇರೆ ಎಂದು ಕೇಳಿದಾಗ, ಕಾಂಗ್ರೆಸ್ ಪಕ್ಷವೇ ಒಂದು ಕುಟುಂಬ. ನಮ್ಮಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ ಎಂದು ಮುಖ್ಯಮಂತ್ರಿಗಳು ವಾಣಿ ವಿಲಾಸ ಸಾಗರ ಆಣೆಕಟ್ಟು ಬಾಗಿನ ಅರ್ಪಣೆ ಕಾರ್ಯಕ್ರಮದ ವೇಳೆ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದರು.