ನ್ಯೂಸ್

ಮಂಡ್ಯದಲ್ಲಿ ನಾಮಪತ್ರ ಸಲ್ಲಿಸಿದ ಎಚ್​ಡಿಕೆ! ಗೋವಾ ಸಿಎಂ ಪ್ರಮೋದ್ ಸಾವಂತ್ ಸಾಥ್​

ಮಂಡ್ಯ: ಇಂದು ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಮಾಜಿ ಸಿಎಂ ಎಚ್​.ಡಿ, ಕುಮಾರಸ್ವಾಮಿಗೆ ಬಿಜೆಪಿ ಹಿರಿಯ ನಾಯಕ ಬಿ.ಎಸ್​. ಯಡಿಯೂರಪ್ಪ, ನಿಖಿಲ್ ಕುಮಾರಸ್ವಾಮಿ, ಯದುವೀರ್​ ಹಾಗೂ ಗೋವಾ ಸಿಎಂ ಪ್ರಮೋದ್ ಸಾವಂತ್ ಸಾಥ್ ನೀಡಿದರು.

ಡಿಸಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲು ಮುಂದಾದ ಎಚ್​​ಡಿಕೆಗೆ ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ಅನ್ನದಾನಿ ಕೂಡ ಸಾಥ್ ನೀಡಿದರು. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಡಿಸಿ ಕಚೇರಿಗೆ ಆಗಮಿಸುತ್ತಿದ್ದಂತೆ ಕಾಲಿಗೆ ಬಿದ್ದ ನಿಖಿಲ್ ಕುಮಾರಸ್ವಾಮಿ ಅವರ ಆರ್ಶಿವಾದ ಪಡೆದರು. ಯಡಿಯೂರಪ್ಪ ಜತೆಗೆ ಮಾಜಿ ಸಚಿವ ನಾರಾಯಣಗೌಡ ಕೂಡ ಆಗಮಿಸಿದರು.