ನ್ಯೂಸ್

ಸಿದ್ದರಾಮಯ್ಯ ಪರ GTD ಬ್ಯಾಟಿಂಗ್​; ಕೇಂದ್ರ ಸಚಿವ HDK ನೀಡಿದ ಕಾರಣ ಹೀಗಿದೆ

ಬೆಂಗಳೂರು: ಮುಡಾ (MUDA) ಬದಲಿ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಸಿಎಂ ಸಿದ್ದರಾಮಯ್ಯ ದೊಡ್ಡ ಉರುಳಾಗಿ ಪರಿಣಮಿಸಿದ್ದು, ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್​ ಅವರ ರಾಜೀನಾಮೆಗೆ ಪಟ್ಟು ಹಿಡಿದಿವೆ. ಇತ್ತ ವಿಪಕ್ಷಗಳು ಸಿಎಂ ರಾಜೀನಾಮೆಗೆ ಆಗ್ರಹಿಸಿರುವ ನಡುವೆಯೇ ಜೆಡಿಎಸ್​ ಶಾಸಕ ಜಿಟಿ. ದೇವೇಗೌಡ ಸಿದ್ದರಾಮಯ್ಯ ಪರ ಬ್ಯಾಟ್​ ಬೀಸಿದ್ದು, ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನವನ್ನೇ ಹುಟ್ಟು ಹಾಕಿದೆ.ಈ ಬಗ್ಗೆ ಕೇಂದ್ರ ಸಚಿವ ಎಚ್​.ಡಿ. ಕುಮಾರಸ್ವಾಮಿ (HD Kumaraswamy) ಮಾತಣಾಡಿದ್ದು, ಅದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.

ನಗರದಲ್ಲಿ ಈ ಕುರಿತು ಮಾತನಾಡಿದ ಎಚ್​ಡಿಕೆ, ರಾಜೀನಾಮೆ ಕೊಡುವ ಸಮಯ ಬಂದಾಗ ನಾನೇ ಕೊಡುತ್ತೇನೆ. ಜಿಟಿ. ದೇವೇಗೌಡರು ಮೈಸೂರಿನವರಾಗಿದ್ದು, ಸಿದ್ದರಾಮಯ್ಯನವರ ಪರ ಹೇಳಿಕೆ ನೀಡಿರುವುದರಲ್ಲಿ ತಪ್ಪೇನಿದೆ. ತೊಂದರೆಗೆ ಸಿಕ್ಕಿ ಹಾಕಿಕೊಳ್ಳಬಾರದೆಂದು ಈ ರೀತಿ ಹೇಳಿದ್ದಾರೆ. ನಾನು FIR ಆದವರೆಲ್ಲಾ ರಾಜೀನಾಮೆ ಕೊಡಬೇಕು ಎಂದು ಹೇಳಿಲ್ಲ. ಸಿದ್ದರಾಮಯ್ಯನವರು ನಡೆದುಕೊಂಡ ರೀತಿಗೆ ನಾವು ಅವರ ರಾಜೀನಾಮೆಗೆ ಒತ್ತಾಯಿಸಿದ್ಧೇವೆ ಎಂದು ಕೇಂದ್ರ ಸಚಿವ ಎಚ್​.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಶಾಸಕ GTD ಹೇಳಿದ್ದೇನು?

ಸಿಎಂ ಸಿದ್ದರಾಮಯ್ಯನವರು (Siddaramaiah) ಚಾಮುಂಡೇಶ್ವರಿ (Chamundeshwari) ತಾಯಿಯ ವರಪುತ್ರ. ಚಾಮುಂಡೇಶ್ವರಿ ಕ್ಷೇತ್ರಕ್ಕೆ ಕಾಲಿಟ್ಟ ವೇಳೆಯಿಂದಲೂ ಸಿದ್ದರಾಮಯ್ಯ ಸಚಿವರಾಗಿ, ಡಿಸಿಎಂ ಆಗಿ, ಎರಡು ಭಾರಿ ಸಿಎಂ ಆಗಿದ್ದಾರೆ ಎಂದರೆ ತಾಯಿ ಚಾಮುಂಡೇಶ್ವರಿ ಆಶೀರ್ವಾದವೇ ಕಾರಣ. ತಾಯಿ ಚಾಮುಂಡೇಶ್ವರಿ ಅವರ ಪಾಲಿಗೆ ಇದ್ದಾರೆ. ಉಪಚುನಾವಣೆ ವೇಳೆ ಸಿದ್ದರಾಮಯ್ಯರನ್ನ ಸೋಲಿಸಲಿಕ್ಕೆ ನಾವು ತೀರ್ಮಾನ ಮಾಡಿದ್ವಿ. ಆದರೆ ಸಿಎಂ ಆ ಚುನಾವಣೆಯಲ್ಲಿ ಗೆದ್ದರು. ಇದಕ್ಕೆ ಕಾರಣ ತಾಯಿ ಚಾಮುಂಡೇಶ್ವರಿ ಆಶೀರ್ವಾದ. ಕಾಂಗ್ರೆಸ್ ಪಕ್ಷವನ್ನ ಅಧಿಕಾರಕ್ಕೆ ತರಲು ಡಿಸಿಎಂ ಡಿಕೆ ಶಿವಕುಮಾರ್ ಕೂಡ ಕಾರಣ. ಸಚಿವ ಮಹದೇವಪ್ಪ ಎಲ್ಲಾ ಸಚಿವ ಸ್ಥಾನವನ್ನ ಪಡೆದಿದ್ದಾರೆ. ಒಬ್ಬ ದಲಿತ ನಾಯಕನನ್ನ ರಾಜ್ಯ ಮಟ್ಟಕ್ಕೆ ಕೊಂಡೋಯ್ದದ್ದು ಸಿದ್ದರಾಮಯ್ಯನವರು.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಯಾಕೆ ರಾಜೀನಾಮೆ ಕೊಡಬೇಕು ಸಿದ್ದರಾಮಯ್ಯ ಯಾವತ್ತೂ ಕುಟುಂಬ ನೋಡಿದವರಲ್ಲ. ಈಗ ಎಲ್ಲಾ ಗಾಜಿನ ಮನೆಯಲ್ಲಿ ಕೂತಿದ್ದಾರೆ. ಎಫ್‌ಐ‌ಆರ್ ಆದವರು ರಾಜೀನಾಮೆ ಕೊಡಬೇಕಾಗಿದ್ದರೆ ಜೆಡಿಎಸ್ ನಲ್ಲಿ ಇರೋರು ರಾಜೀನಾಮೆ ಕೊಡ್ತಾರಾ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೀನಾಮೆ ಕೊಡಲು ನ್ಯಾಯಾಲಯ ಹೇಳಿದ್ಯಾ. ಕೇಂದ್ರದಲ್ಲಿ ಮಂತ್ರಿ ಆದವರಿಗೆ ಜವಾಬ್ದಾರಿ ಬೇಡ್ವಾ ಕುಮಾರಸ್ವಾಮಿ ಗೆ ರಾಜೀನಾಮೆ ಕೊಡು ಅಂದರೆ ಕೊಡುತ್ತಾರಾ ಎಂದು ಪ್ರಶ್ನಿಸುವ ಮೂಲಕ ಬಿಜೆಪಿ-ಜೆಡಿಎಸ್​ ಮೈತ್ರಿ ಪಕ್ಷಗಳ ವಿರುದ್ಧವೂ ಗುಡುಗಿದರು.