ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶತಾಯಗತಾಯ ಗೆಲ್ಲಲೇಬೇಕು, ಸ್ವತಂತ್ರವಾಗಿ ಅಧಿಕಾರದ ಚುಕ್ಕಾಣಿ ಹಿಡಿಯಲೇಬೇಕೆಂದು ಪಣತೊಟ್ಟಿರುವ ದಳಪತಿಗಳು ಅಳೆದು-ತೂಗಿ, ಒಳ್ಳೆಯ ಮುಹೂರ್ತದಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು(ಸೋಮವಾರ) ಬಿಡುಗಡೆ ಮಾಡಿದರು.
ಮಗನಿಗಾಗಿ ಕ್ಷೇತ್ರ ತ್ಯಾಗ ಮಾಡಿರುವುದಾಗಿ ಶನಿವಾರ ರಾಮನಗರದಲ್ಲಿ ನಡೆಯುತ್ತಿದ್ದ ಪಂಚರತ್ನ ರಥಯಾತ್ರೆಯಲ್ಲಿ ರಾಮನಗರಕ್ಕೆ ನಿಖಿಲ್ ಕುಮಾರಸ್ವಾಮಿಯೇ ಅಭ್ಯರ್ಥಿ ಎಂದು ಅನಿತಾಕುಮಾರಸ್ವಾಮಿ ಘೋಷಿಸಿದ್ದರು. ಆದರೆ, ಇಂದು ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ಪಕ್ಷದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ಬಿಡುಗಡೆ ಮಾಡಿದ ಮೊದಲ ಪಟ್ಟಿಯಲ್ಲಿ ನಿಖಿಲ್ ಹೆಸರು ಮತ್ತು ರಾಮನಗರ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಇಲ್ಲ.
ಹಾಸನ ಜಿಲ್ಲೆಯಲ್ಲಿ ಭವಾನಿ ರೇವಣ್ಣ ಟಿಕೆಟ್ ಆಕಾಂಕ್ಷಿಯಾಗಿದ್ದು, ಮತ್ತೊಂದೆಡೆ ಶಿವಲಿಂಗೇಗೌಡ ಪಕ್ಷ ಬಿಡುವ ವದಂತಿ ಇದೆ. ಹಾಸನ ಜಿಲ್ಲೆಯ ಅಭ್ಯರ್ಥಿಗಳ ಘೋಷಣೆಯನ್ನು ಎಚ್ಡಿಕೆ ಕಾಯ್ದಿರಿಸಿದ್ದಾರೆ.
ಒಟ್ಟು 93 ಕ್ಷೇತ್ರಗಳಿಗೆ ಅಭ್ಯರ್ಥಿಗಳು ಅಂತಿಮವಾಗಿದೆ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಅನುಮೋದನೆ ಮೇರೆಗೆ ಸಿಎಂ ಇಬ್ರಾಹಿಂ ಸಮ್ಮುಖದಲ್ಲಿ ಕುಮಾರಸ್ವಾಮಿ ಪಟ್ಟಿ ಬಿಡುಗಡೆ ಮಾಡಿದರು.