ನ್ಯೂಸ್

ದುಬೈನಲ್ಲಿ ಉಂಗುರ, ಬೆಲ್ಟ್, ವಾಚ್ ತೆಗೆಸಿದ್ದರು!

ಬೆಂಗಳೂರು: ಇತ್ತೀಚೆಗೆ ದುಬೈಗೆ ತೆರಳಿದ್ದಾಗ ನನ್ನ ಉಂಗುರ, ಬೆಲ್ಟ್, ವಾಚ್‌ಗಳನ್ನು ತೆಗೆಸಿದ್ದರು. ಇಂತಹ ಭದ್ರತೆ ಮಧ್ಯೆ 14 ಕೆಜಿ ಚಿನ್ನ ಕಳ್ಳಸಾಗಣೆ ಹೇಗೆ ಸಾಧ್ಯ ಎಂದು ನನಗೂ ಅಚ್ಚರಿಯಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಯಾವುದೇ ಸಚಿವರು ಅಪರಾಧ ಮಾಡಲು ಬೆಂಬಲ ನೀಡುವುದಿಲ್ಲ. ಪ್ರಕರಣದಲ್ಲಿ ಶಿಷ್ಟಾಚಾರ ಉಲ್ಲಂಘನೆ ಬಗ್ಗೆ ಸಿಎಂ ಕೂಡ ಆಂತರಿಕ ತನಿಖೆಗೆ ಆದೇಶಿಸಿದ್ದಾರೆ ಎಂದರು.

ಸಚಿವರ ಕೈವಾಡವಿದೆ ಎನ್ನುವುದು ಊಹಾಪೋಹ. ಇದು ಬಿಜೆಪಿಯ ಗೇಮ್ ಪ್ಲ್ಯಾನ್. ಯಾವ ಸಚಿವರ ಹೆಸರಿದೆ? ಯಾರಾದರೂ ನೋಡಿದ್ದಾರಾ? ಕೇಳಿದ್ದಾರಾ? ನಾವು ಮದುವೆ ಸೇರಿ ಶುಭ ಕಾರ್ಯಕ್ರಮಗಳಿಗೆ ಹೋಗುತ್ತಿರುತ್ತೇವೆ. ಅಲ್ಲಿ ಅನೇಕರು ನಮ್ಮ ಜತೆ ಫೋಟೋ ತೆಗೆಸಿಕೊಳ್ಳುತ್ತಾರೆ. ಯಾರೋ ನನ್ನ ಪಕ್ಕ ನಿಂತುಕೊಂಡ ತಕ್ಷಣ ನನಗೂ ಅವರಿಗೂ ಸಂಬಂಧ ಇದೆ ಎಂದು ಭಾವಿಸಲು ಸಾಧ್ಯವೇ ಎಂದು ಪ್ರಶ್ನಿಸಿದರು.

ೆಟೋ ತೆಗೆಸಿಕೊಂಡವರು ಅಪರಾಧ ಎಸಗಿದರೆ ಅದಕ್ಕೆ ನಾವು ಬೆಂಬಲ ನೀಡಿದ್ದೇವೆ ಎಂದು ಹೇಳಲು ಸಾಧ್ಯವೇ? ಯಾವ ಸಚಿವರು ಯಾವ ಕೇಸಿನಲ್ಲಿ ಭಾಗಿಯಾಗಿದ್ದಾರೆ ಎಂದು ಸ್ಪಷ್ಟವಾಗಿ ಹೇಳಲಿ ಎಂದು ಪ್ರತಿಪಕ್ಷಕ್ಕೆ ಡಿಸಿಎಂ ಸವಾಲು ಹಾಕಿದರು.

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಸೂಕ್ತ ತನಿಖೆಯಾಗಲಿ. ಬಳಿಕವಷ್ಟೇ ಪ್ರಕರಣದ ಸತ್ಯಾಸತ್ಯತೆ ತಿಳಿಯಲಿದೆ.

ಲಕ್ಷ್ಮೀ ಹೆಬ್ಬಾಳ್ಕರ್, ಸಚಿವೆ