ಬೆಂಗಳೂರು: ಕೆ.ಜಿ.ಹಳ್ಳಿ ಠಾಣೆಯ ಹೆಡ್ ಕಾನ್ಸ್‌ಟೆಬಲ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರವೀಂದ್ರ ಮೃತ ಪೇದೆ.
ಕಳೆದ ನಾಲ್ಕೈದು ವರ್ಷಗಳಿಂದ ಕೆ.ಜಿ.ಹಳ್ಳಿ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದರು. ಮದುವೆಯಾಗಿ ಒಂದು ಮಗು ಇದೆ. ಇಂದು ಹೆಗ್ಡೆನಗರದ ರೈಲ್ವೆ ಟ್ರ್ಯಾಕ್ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ. ಕೌಟುಂಬಿಕ ಕಲಹ ಇರಬಹುದು ಎಂದು ಅಂದಾಜಿಸಲಾಗಿದೆ. ಕೆ.ಜಿ.ಹಳ್ಳಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದಾರೆ.