ಬೆಂಗಳೂರು: ಕೊತ್ತಂಬರಿ ಸೊಪ್ಪನ್ನು ಅಡುಗೆಯ ಪರಿಮಳವನ್ನು ಹೆಚ್ಚಿಸಲು ಬಳಸಲಾಗುತ್ತದೆ. ಇದು ಆರೋಗ್ಯಕ್ಕೂ ಪ್ರಯೋಜನಕಾರಿ. ಆದರೆ ಕೊತ್ತಂಬರಿ ಸೊಪ್ಪಿನಿಂದ ಮುಖದ ಅಂದವನ್ನು ಕೂಡ ಹೆಚ್ಚಿಸಿಕೊಳ್ಳಬಹುದು ಎಂದು ತಿಳಿದರೆ ನಿಮಗೆ ಆಶ್ಚರ್ಯವಾಗುತ್ತದೆ. ಹೌದು, ಇದರಲ್ಲಿ ಆ್ಯಂಟಿ ಆಕ್ಸಿಡೆಂಟ್‌ಗಳು, ಬೀಟಾ ಕ್ಯಾರೋಟಿನ್, ವಿಟಮಿನ್ ಸಿ ಮತ್ತು ಫೋಲೇಟ್ ಇದೆ, ಇದು ಚರ್ಮಕ್ಕೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ತೆಗೆದುಹಾಕುವಲ್ಲಿ ಉಪಯುಕ್ತವಾಗಿದೆ.
ಕೊತ್ತಂಬರಿಯಲ್ಲಿ ಆ್ಯಂಟಿ ಫಂಗಲ್ ಗುಣವೂ ಇದೆ. ಇದನ್ನು ಬಳಸುವುದರಿಂದ ತ್ವಚೆಯನ್ನು ಹಲವು ರೀತಿಯ ಸೋಂಕುಗಳಿಂದ ರಕ್ಷಿಸಿಕೊಳ್ಳಬಹುದು. ಮುಖದ ಮೇಲಿನ ಅಕಾಲಿಕ ವಯಸ್ಸಾದ ಚಿಹ್ನೆಗಳನ್ನು ತೆಗೆದುಹಾಕಲು ಇದು ತುಂಬಾ ಉಪಯುಕ್ತವಾಗಿದೆ. ಇದನ್ನು ಫೇಸ್ ಪ್ಯಾಕ್ ಆಗಿ ಬಳಸುವುದರಿಂದ ಮೊಡವೆಗಳ ಸಮಸ್ಯೆಯನ್ನು ಕಡಿಮೆ ಮಾಡಬಹುದು.
ಹೌದು, ಮುಖದ ಹೊಳಪನ್ನು ಹೆಚ್ಚಿಸಲು ಮತ್ತು ಎಣ್ಣೆ ಮುಕ್ತ ತ್ವಚೆ ಪಡೆಯಲು ಬಯಸುವವರು ಕೊತ್ತಂಬರಿ ಸೊಪ್ಪಿಗೆ ಅಲೋವೆರಾ ಜೆಲ್ ಮತ್ತು ನಿಂಬೆ ರಸವನ್ನು ಬೆರೆಸಿ ಫೇಸ್ ಪ್ಯಾಕ್ ರೆಡಿ ಮಾಡಿ. ಈಗ ಅದನ್ನು ಮುಖದ ಮೇಲೆ 20 ನಿಮಿಷಗಳ ಕಾಲ ಹಚ್ಚಿ. ನಂತರ ನೀರಿನಿಂದ ಮುಖವನ್ನು ತೊಳೆಯಿರಿ . ಹೀಗೆ ಮಾಡುವುದರಿಂದ ಮುಖದ ಮೇಲಿನ ಸುಕ್ಕುಗಳು ಕ್ರಮೇಣ ಮಾಯವಾಗುತ್ತವೆ.