IMD Alert: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾನುವಾರವೂ ಮಳೆ ಸುರಿದಿದೆ. ಹಾಸನ, ಚಿಕ್ಕಮಗಳೂರು, ಬೆಂಗಳೂರು, ಮೈಸೂರು ಮತ್ತು ಇನ್ನಿತರ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಬಿರುಸಿನ ಮಳೆಯಾಗಿದೆ.
ಇದನ್ನೂ ಓದಿ: Vijayavani Education Expo 2025 | ವಿದ್ಯಾರ್ಥಿಗಳ ಗೊಂದಲ ಪರಿಹರಿಸಿದ ವಿಜಯವಾಣಿ ಎಜುಕೇಷನ್ ಎಕ್ಸ್ಪೋ
ಭಾರತೀಯ ಹವಾಮಾನ ಇಲಾಖೆ ಪ್ರಕಟಿಸಿರುವ ಇತ್ತೀಚಿನ ವರದಿ ಪ್ರಕಾರ, ರಾಜ್ಯದಲ್ಲಿ ಮೇ.22 ರವರೆಗೂ ಭಾರೀ ಮಳೆ ಸುರಿಯಲಿದೆ. ಶುಕ್ರವಾರ (ಮೇ.17) ಸಂಜೆಯ ನಂತರದಿಂದ ಮೇ.22ರ ತನಕ ಬಿರುಸಿನ ಮಳೆ ಹಲವೆಡೆ ಸುರಿಯಲಿದೆ ಎಂದು ತಿಳಿಸಲಾಗಿದೆ. ರಾಜ್ಯದ ಹಲವು ಜಿಲ್ಲೆಗಳಿಗೆ ವರುಣಾರ್ಭಟದ ಮುನ್ಸೂಚನೆಯನ್ನು ಇಲಾಖೆ ನೀಡಿದೆ.
ದಕ್ಷಿಣ ಕರ್ನಾಟದಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಗಾಳಿ ಮಳೆ ಸಂಭವಿಸಲಿದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಮೈಸೂರು, ಹಾಸನ, ಕೊಡಗು, ಬೆಳಗಾವಿ, ಬೀದರ್, ರಾಯಚೂರು ಯಾದಗಿರಿ, ದಾವಣಗೆರೆ, ಚಿತ್ರದುರ್ಗ ಮತ್ತು ಗಡಿಪ್ರದೇಶಗಳು ಯೆಲ್ಲೋ ಅಲರ್ಟ್ಗೆ ಒಳಪಟ್ಟಿವೆ.
ಮುಂದಿನ ದಿನಗಳಲ್ಲಿ ಈ ಜಿಲ್ಲೆಗಳಲ್ಲಿ ಮಿಂಚು ಮತ್ತು ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾದ ಹವಾಮಾನ ಬದಲಾವಣೆಗಳಿಂದ ನೆರೆ ರಾಜ್ಯಗಳಾದ ಆಂಧ್ರಪ್ರದೇಶ ಮತ್ತು ತಮಿಳುನಾಡು ರಾಜ್ಯಗಳಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಗಳು ಸೂಚಿಸಿವೆ,(ಏಜೆನ್ಸೀಸ್).